nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ: ರಾಜೇಶ್ ಹಿರೇಮಠ್ ಕರೆ
    ತುಮಕೂರು August 28, 2024

    ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ: ರಾಜೇಶ್ ಹಿರೇಮಠ್ ಕರೆ

    By adminAugust 28, 2024No Comments2 Mins Read
    Rajesh Hiremata

    ತುಮಕೂರು: ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ ಬದುಕಿನ ಸಾರ್ಥಕತೆ ಕಂಡುಕೊಳ್ಳಬಹುದು ಎಂದು ರಾಜ್ ಟೆಕ್ನಾಲಜೀಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ಹಿರೇಮಠ್ ಹೇಳಿದರು.

    ತುಮಕೂರು ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿರುವ ‘ಉದ್ಯಮಶೀಲತಾ ಸಪ್ತಾಹ’ದ ಅಂಗವಾಗಿ ಮೂರು ದಿನಗಳ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಗಳ ನವ್ಯೋದ್ಯಮ ಮಳಿಗೆಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಭಾರತೀಯರನ್ನು ಗುಲಾಮರನ್ನಾಗಿ, ಕೆಲಸಗಾರರನ್ನಾಗಿ ರೂಪಿಸಿದ ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯನ್ನು ಹಿಮ್ಮೆಟ್ಟಿಸಿ, ನಮ್ಮಉತ್ಸಾಹಕ್ಕೆ ಪೂರಕವಾದ ಮಾರ್ಗವನ್ನು ಆರಿಸಿನಡೆಯುವ ಕಾಲವಿದು. ವಾಣಿಜ್ಯೋದ್ಯಮಿಗಳಾಗುವವರಿಗೆ ನಮ್ಯತೆ, ಸ್ವಾತಂತ್ರ್ಯ ಸ್ವಾಯತ್ತತೆ, ಸೃಜನಶೀಲತೆ, ಉತ್ಸಾಹವೇ ಬಂಡವಾಳ, ವಿವಿಧ ಸೇವೆ ಒದಗಿಸುವ ವ್ಯವಹಾರವನ್ನು ಪ್ರಾರಂಭಿಸುವುದೇ ಪ್ರಸ್ತುತ ಪ್ರವೃತ್ತಿಎಂದು ತಿಳಿಸಿದರು.

    ಉದ್ಯಮಿ ಡಾ.ಆರ್.ಎಲ್.ರಮೇಶ್ ಬಾಬು ಮಾತನಾಡಿ, ವಿಭಿನ್ನ ಆಲೋಚನೆಗಳೇ ಯಶಸ್ವಿ ಜೀವನಕ್ಕೆ ಮುನ್ನುಡಿ. ಸಮಾಜಮುಖಿ ಉದ್ಯಮಗಳನ್ನು ಆರಂಭಿಸಿದಾಗ ಜನರನ್ನು ಬೇಗ ತಲುಪಬಹುದು. ಪರಿಸರ ಸ್ನೇಹಿ, ಜನ ಸ್ನೇಹಿ ಉತ್ಪನ್ನಗಳನ್ನು ಜನರು ಬಯಸುತ್ತಾರೆ. ಉತ್ಪನ್ನದಗುಣಮಟ್ಟದ ಮೇಲೆ ಜನರ ನಂಬಿಕೆ ಗಳಿಸಿ ಉದ್ಯಮವನ್ನು ಎತ್ತರಕ್ಕೆಕೊಂಡೊಯ್ಯಬಹುದು ಎಂದರು.

    ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ.ಮಾತನಾಡಿ, ಸ್ವಯಂಉದ್ಯಮ ಆರಂಭಿಸುವ ಮುನ್ನ ಮಾರುಕಟ್ಟೆಯ ವಾಸ್ತವ ಅನುಭವಗಳ ಪರಿಚಯವಾಗಬೇಕು. ಸ್ಪರ್ಧಾತ್ಮಕಯುಗದಲ್ಲಿಉದ್ಯಮದ ಮೇಲಿರುವ ಬದ್ಧತೆಯು ಯಶಸ್ಸಿಗೆ ಕಾರಣವಾಗುತ್ತದೆ ಎಂದು ಹೇಳಿದರು.

    ವಿವಿಯ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ನೂರ್ ಅಫ್ಜಾ ಮಾತನಾಡಿ, ಪ್ರಾಯೋಗಿಕವಾಗಿ ನವೋದ್ಯಮಗಳನ್ನು ಆರಂಭಿಸಿ, ಉದ್ಯಮಿಗಳಾಗಲು ಈ ಸಪ್ತಾಹವು ಸಹಕಾರಿಯಾಗಲಿದೆ. ಗೋಡೆಗಳಾಚೆ ವಿಭಿನ್ನ ಕಲ್ಪನೆಗಳನ್ನು ಹುಡುಕುವುದು ಸಪ್ತಾಹದ ಮುಖ್ಯಉದ್ದೇಶ ಎಂದು ತಿಳಿಸಿದರು.

    ವಿದ್ಯಾರ್ಥಿಗಳೇ ಸಣ್ಣಬಂಡವಾಳದ ಆಹಾರ, ಸಿರಿಧಾನ್ಯ, ಫ್ಯಾಷನ್, ಗೃಹ ಅಲಂಕಾರ ಮಳಿಗೆಗಳನ್ನು ತೆರೆದಿದ್ದರು. ಮೂರು ದಿನಗಳ ವರೆಗೂ (ಆ.೨೭ರಿಂದ ಆ.೨೯ರ) ತೆರೆದಿರುವವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಮಳಿಗೆಗಳಿಗೆ ಸಾರ್ವಜನಿಕರು ಮಧ್ಯಾಹ್ನ ೧ ಗಂಟೆಯ ನಂತರ ಭೇಟಿ ನೀಡಬಹುದಾಗಿದೆ.

    ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ಹಿರಿಯ ವಿದ್ಯಾರ್ಥಿ, ಚಂದ್ರಮೌಳೇಶ್ವರ ಟ್ರೇಡರ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ಮಾರುತಿಆಗ್ರೋ ನರ್ಸರಿ ಸಂಸ್ಥಾಪಕ ಕೋದಂಡರಾಮ ಎನ್., ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಸಂಯೋಜಕ ಪ್ರೊ.ಎ.ಮೋಹನ್‌ರಾಮ್ ಉಪಸ್ಥಿತರಿದ್ದರು. ಉಪನ್ಯಾಸಕಿ ಇಂಪಾ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.