ಬೆಂಗಳೂರು : ಬೀದಿನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿ ಬಲಿಯಾದ ಘಟನೆ ಬೆಂಗಳೂರಿನ ಜಾಲಹಳ್ಳಿಯ ವಾಯುಸೇನಾ ನೆಲೆಯ 7ನೇ ವಸತಿಗೃಹ ಕ್ಯಾಂಪಸ್ ನಲ್ಲಿ ನಡೆದಿದೆ.
ರಾಜ್ದುಲಾರಿ ಸಿನ್ಹಾ(76) ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿಯಾಗಿದ್ದಾರೆ. ವಾಕಿಂಗ್ ಮಾಡುತ್ತಿದ್ದಾಗ, ರಾಜ್ದುಲಾರಿ ಸಿನ್ಹಾ ಮೇಲೆ ಸುಮಾರು 10 ರಿಂದ 12 ಬೀದಿ ನಾಯಿಗಳು ದಾಳಿ ಮಾಡಿದ್ದವು.
ಇದರಿಂದ ಗಂಭೀರ ಗಾಯಗೊಂಡಿದ್ದ ರಾಜ್ದುಲಾರಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿ ಕಡಿತದಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಮಹಿಳೆಯೊಬ್ಬರ ಪ್ರಾಣ ಬಲಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


