ಜಮ್ಮು–ಕಾಶ್ಮೀರ: ಭಾರತೀಯ ಸೇನಾಪಡೆ ಎನ್ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಈ ನಡುವೆ ರಜೌರಿಯಲ್ಲಿಯೂ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಕಾಳಗ ಮುಂದುವರೆದಿದ್ದು, ಸೇನಾಪಡೆ ಎನ್ಕೌಂಟರ್ ಆರಂಭಿಸಿದೆ.
ಖೇರಿ ಮೊಹ್ರಾ ಲಾಠಿ ಮತ್ತು ದಂತಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ 9:30ರ ಸುಮಾರಿಗೆ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೇನಾಪಡೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
ಶೋಧನಾ ಕಾರ್ಯಾಚರಣೆ ವೇಳೆ ರಾತ್ರಿ 11:45 ರ ಸುಮಾರಿಗೆ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಈ ವೇಳೆ ಸೇನಾಪಡೆ ಕೂಡ ದಿಟ್ಟ ಉತ್ತರ ನೀಡಿದ್ದು, ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q