ಬೆಂಗಳೂರು: ಆಗಸ್ಟ್ 30 ಮತ್ತು 31 ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿರುವ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಬಗ್ಗೆ ಮಾಹಿತಿ ನೀಡಿದ ಅವರು, ಮಾಂಸ, ಮೀನು, ಮೊಟ್ಟೆಗಳ ಆಹಾರ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರಲ್ಲದೇ, ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಾರ್ವಜನಿಕರು ತಾವು ಸೇವಿಸುವ ಆಹಾರದ ಗುಣಮಟ್ಟವನ್ನು ತಾವೇ ಪರೀಕ್ಷಿಸಿಕೊಳ್ಳಲು ಅನುಕೂಲವಾಗುವಂತೆ ಹೋಟೆಲ್, ರೆಸ್ಟೋರೆಂಟ್, ಫುಡ್ ಪಾರ್ಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3,400 ಟೆಸ್ಟಿಂಗ್ ಕಿಟ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


