ಗ್ಯಾಂಗ್ಟಾಕ್: 61 ವರ್ಷ ವಯಸ್ಸಿನ ವಿಕಲಚೇತನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ವೈರಲ್ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಸಿಕ್ಕಿಂ ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ 26ರಂದು ಜೋರೆಥಾಂಗ್ ಟೌನ್ ಬಸ್ ಪಾರ್ಕಿಂಗ್ ಕಾಂಪ್ಲೆಕ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಕೃತ್ಯವನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.
ನಾಲ್ವರು ಆರೋಪಿಗಳ ಪೈಕಿ ಮೂವರು ಅಪ್ರಾಪ್ತ ವಯಸ್ಕರು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ನೀಡಿದ ದೂರು ಆಧರಿಸಿ ಆರೋಪಿಗಳನ್ನ ಬಂಧಿಸಲಾಗಿತ್ತು. ಆರೋಪಿಗಳನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q