ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತನ್ನ ಸ್ಪರ್ಧೆ ಖಚಿತ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಅಭ್ಯರ್ಥಿ ಆಯ್ಕೆಯ ಕುರಿತಾಗಿ ಬಿಜೆಪಿ, ಜೆಡಿಎಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ. ತಮ್ಮನ್ನೇ ಕಣಕ್ಕೆ ಇಳಿಸಬೇಕೆಂದು ಸಿ.ಪಿ. ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವೊಲಿಸಬೇಕೆಂದು ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ರಾಜ್ಯ ಬಿಜೆಪಿ ನಾಯಕರು ಹಾಗೂ ಹೆಚ್.ಡಿ. ಕುಮಾರಸ್ವಾಮಿ ಸಭೆ ನಡೆಸಿದ್ದು, ಈ ಬಾರಿ ಯೋಗೇಶ್ವರ್ ಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿದೆ. ಇದಕ್ಕೆ ಕುಮಾರಸ್ವಾಮಿ ಒಪ್ಪಿಲ್ಲ. ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಹೆಜ್ಜೆ ಇಡುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಟಿಕೆಟ್ ಸಿಗಲಿ, ಬಿಡಲಿ ಸ್ಪರ್ಧೆಯಂತೂ ನಿಶ್ಚಿತವೆಂದು ಸಿ.ಪಿ. ಯೋಗೇಶ್ವರ್ ಹೇಳಿದ್ದು, ನಾಯಕರ ಮುಂದೆ ಮೂರು ಆಯ್ಕೆಗಳನ್ನು ಇಟ್ಟಿದ್ದಾರೆ. ಬಿಜೆಪಿಯಿಂದ ಸ್ಪರ್ಧೆಗೆ ಟಿಕೆಟ್ ನೀಡಬೇಕು. ಒಂದು ವೇಳೆ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂದಾದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ ಆಗುತ್ತೇನೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


