ತುಮಕೂರು: ಕಾರ್ಮಿಕ ಇಲಾಖೆಯು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಜೇಷ್ಠತೆ ಆಧಾರದಲ್ಲಿ ಮೇಸನ್ ಕಿಟ್, ವೆಲ್ಡಿಂಗ್ ಕಿಟ್, ರೋಡ್ ಕನ್ಸಟಕ್ಷನ್ ಕಿಟ್ ಸೇರಿದಂತೆ ವಿವಿಧ ಟೂಲ್ ಕಿಟ್ ಗಳನ್ನು ವಿತರಿಸುತ್ತಿದ್ದು, ಸವಲತ್ತು ಪಡೆಯಲಿಚ್ಛಿಸುವ ಅರ್ಹ ಕಟ್ಟಡ ಕಾರ್ಮಿಕರು ಆಯಾ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕಾರ್ಮಿಕ ಅಧಿಕಾರಿ ತೇಜಾವತಿ ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರ ಚಾಲ್ತಿಯಲ್ಲಿರುವ ಗುರುತಿನ ಚೀಟಿಯೊಂದಿಗೆ ಸೆಪ್ಟೆಂಬರ್ 17ರೊಳಗಾಗಿ ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q