ತುಮಕೂರು: ಮಹಾರಾಷ್ಟದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 12ರಂದು ನಡೆಯಲಿರುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಯಾತ್ರೆ ಕೈಗೊಳ್ಳಲಿಚ್ಛಿಸುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳಿಂದ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 5ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 10 ರಿಂದ 14ರವರೆಗೆ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಳುಹಿಸಿಕೊಡಲು ಸಾರಿಗೆ ವ್ಯವಸ್ಥೆ/ರೈಲಿನ ವ್ಯವಸ್ಥೆ ಕಲ್ಪಿಸುವ ಸಂಬಂಧ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swdservices.karnataka.gov.in/ ಗೆ ಭೇಟಿ ನೀಡಿ ಸೆಪ್ಟೆಂಬರ್ 5ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q