ತುಮಕೂರು: ಪಟಾಕಿ ತುಂಬಿದ ಗೋಡೌನ್ ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ನಗರದ ಹೃದಯ ಭಾಗ ಮಂಡಿ ಪೇಟೆಯಲ್ಲಿ ನಡೆದಿದೆ.
ಹೊತ್ತಿ ಉರಿದ ಪಟಾಕಿ ಜೊತೆಗೆ ಪಕ್ಕದಲ್ಲಿಯೇ ಇದ್ದ ಪ್ಲಾಸ್ಟಿಕ್ ಅಂಗಡಿ, ಗ್ರಂಥಿಗೆ ಅಂಗಡಿಯ ಗೋದಾಮಿಗೂ ಬೆಂಕಿ ವ್ಯಾಪಿಸಿತ್ತು. ಮೆಟ್ರೋ ಮುಂಭಾಗ ಇರುವ ನೇತಾಜಿ ಸ್ಟೋರ್ ಗೋದಾಮಿನಲ್ಲಿ ಪಟಾಕಿ, ಗ್ರಂಥಿಗೆ, ಸ್ಡೇಷನರಿ ಪ್ಲಾಸ್ಟಿಕ್ ವಸ್ತುಗಳ ಅಂಗಡಿ ಇತ್ತು. ರಾಮಕೃಷ್ಣ ಎಂಬುವರಿಗೆ ಸೇರಿದ ಅಂಗಡಿ ಮಳಿಗೆ ಇದಾಗಿದ್ದು,, ಬೆಳಗ್ಗೆ 8ಗಂಟೆಯಿಂದ ಗೋದಾಮು ಹೊತ್ತಿಉರಿಯುತ್ತಿದೆ.
ಅಕ್ರಮ ಪಟಾಕಿ ಶೇಖರಣೆಯಿಂದ ಭಾರಿ ಅನಾಹುತವಾಗಿದ್ದು ನಿರಂತರವಾಗಿ ಪಟಾಕಿಗಳು ಸ್ಪೋಟಗೊಂಡಿವೆ. ಗೋದಾಮಿಗೆ ಹೊಂದಿಕೊಂಡಂತೆ ಮನೆಗಳಿದ್ದು, ಪಟಾಕಿ ಸ್ಪೋಟದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ.
ಸುತ್ತಮುತ್ತಲ ಪ್ರದೇಶದಲ್ಲಿ ಆವರಿಸಿದ ದಟ್ಟವಾದ ಹೊಗೆ ಆವರಿಸಿತ್ತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಬೆಳಗ್ಗೆ 8 ಗಂಟೆಯಿಂದ ನಿರಂತರವಾಗಿ ಕಾರ್ಯಾಚರಣೆ ನಡೆದಿದೆ.
ಮಂಡಿಪೇಟೆ ರಸ್ತೆಯಲ್ಲಿ ಎರಡು ಕಡೆ ಬಂದ್ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q