ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದೆ.
ವರದಿಗಳ ಪ್ರಕಾರ, ಇದೇ ವಾರ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆಯಂತೆ. ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತನಿಖಾ ತಂಡ ಕೆಲ ವಿಧಿವಿಜ್ಞಾನ ಮತ್ತು ತಾಂತ್ರಿಕ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಕೂಡಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


