ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿನ ಪಾದಾಚಾರಿ ಮಾರ್ಗದಲ್ಲಿರುವ ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಲು ಪಾಲಿಕೆ ಬಿಬಿಎಂಪಿ ಮುಂದಾಗಿದೆ.
ಬೆಂಗಳೂರು ನಗರದಲ್ಲಿ ಹರಡಿರುವ ಪ್ರಮುಖ ರಸ್ತೆಗಳಲ್ಲಿನ ಬದಿಯಲ್ಲಿರುವ ಬೀದಿಬದಿ ಅಂಗಡಿಗಳ ತೆರವಿಗೆ ಬೆಂಗಳೂರು ಮಹನಾಗರ ಸಿದ್ಧತೆ ಮಾಡಿಕೊಳ್ಳುತ್ತಿದೆ. ನಗರದಲ್ಲಿ ಸುಮಾರು 1,200 ಕಿ.ಮೀ.ಗೂ ಅಧಿಕ ಉದ್ದದ ಪ್ರಮುಖ ರಸ್ತೆಗಳಿವೆ. ಈ ರಸ್ತೆಗಳ ಎರಡೂ ಬದಿಯಲ್ಲಿ ಬೀದಿಬದಿ ವ್ಯಾಪಾರಿಗಳು ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದಾರೆ. ಇದೀಗ ಈ ರೀತಿ ಪ್ರಮುಖ ರಸ್ತೆಯ ಫುಟ್ ಪಾತ್ ಮೇಲಿನ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಲು ಪಾಲಿಕೆ ಮುಂದಾಗುತ್ತಿದೆ.
ಕೆ.ಆರ್.ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಚಿಕ್ಕಪೇಟೆ, ಜಯನಗರ ಶಾಪಿಂಗ್ ಕಾಂಪ್ಲೆಕ್ಸ್, ಹೆಬ್ಬಾಳ ಹೂವಿನ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ ಹೀಗೆ ನಗರದ ಮಾರುಕಟ್ಟೆಗಳಿಗೆ ಹೊಂದಿರುವ ರಸ್ತೆಗಳ ಫುಟ್‌ಪಾತ್ ಮೇಲೆ ಹೆಚ್ಚು ಬೀದಿಬದಿ ವ್ಯಾಪಾರಿಗಳಿದ್ದಾರೆ.
ಇದರಿಂದಾಗಿ ಪಾದಾಚಾರಿಗಳಿಗೆ ಸಮಸ್ಯೆ ಆಗುತ್ತಿದೆ ಎನ್ನುವುದು ಪಾಲಿಕೆ ವಾದ. ಹೀಗಾಗಿ ತೆರವು ಮಾಡಿ ಪಾದಾಚಾರಿಗಳಿಗೆ ಅನುವು ಮಾಡಿಕೊಡಬೇಕು ಎನ್ನುವುದು ಹೈಕೋರ್ಟ್ ನಿದರ್ಶನ ಅಂತ ಪಾಲಿಕೆ ಅಧಿಕಾರಿಗಳು ಹೇಳುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


