ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾದರೆ, ಅದನ್ನು ಹೈಕಮಾಂಡ್ ನವರು ನಿಭಾಯಿಸುತ್ತಾರೆ. ಆ ಸಂದರ್ಭ ಬಂದಾಗ ಮುಖ್ಯಮಂತ್ರಿ ಆಗುವವರು ಒಬ್ಬರೇ ಅಲ್ಲವೆ. ಆದ್ರೆ ಆ ಪರಿಸ್ಥಿತಿ ಈಗ ಇಲ್ಲ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ, ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗೆ ನಾನು ಊಟಕ್ಕೆ ಹೋಗಿದ್ದೆ, ಇಬ್ಬರು ರಾಜಕಾರಣಿಗಳು ಭೇಟಿಯಾದಾಗ ಏನು ಮಾತನಾಡಿದ್ದೇವೆ ಎಂದರೆ ಅದ್ರಂತೆ ರಾಜಕೀಯದ ಬಗ್ಗೆ ಮಾತನಾಡಿದ್ದೇನೆ. ಮಾಧ್ಯಮದವರೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದರು.
ಸರಕಾರದಲ್ಲಿ ಟೀಕೆ ಟಿಪ್ಪಣಿಗಳನ್ನು ಕೇಳಿದ್ದೇವೆ, ಈಗಾಗಲೇ ನಮಗೆ ಗೊತ್ತಿಲ್ಲದಂತೆ ನ್ಯಾಯಾಲಯದಲ್ಲಿ ನಡೆಯುತ್ತಿದೆ, ಗುತ್ತಿಗೆದಾರರಿಂದ ಬಂದಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದರು. ಬಿಜೆಪಿ ಸರಕಾರದಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದ್ದೇವೆ. ಹಗರಣಗಳ ಬಗ್ಗೆ ನಡೆಯುವ ಅಧ್ಯಯನ ನಡೆದು ಮಧ್ಯಂತರ ವರದಿ ಬಂದಿವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


