nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ: ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು September 2, 2024

    ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ: ಸಚಿವ ಡಾ.ಜಿ.ಪರಮೇಶ್ವರ್

    By adminSeptember 2, 2024No Comments2 Mins Read
    g parameshwar

    ತುಮಕೂರು:  ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ಕಳೆದ 36 ವರ್ಷಗಳಿಂದ ವಿವಿಧ ಸಂಘಟನೆಗಳನ್ನೊಳಗೊಂಡ ದಸರಾ ಸಮಿತಿಯಿಂದ ನಗರದಲ್ಲಿ ದಸರಾ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ದಸರಾ ಉತ್ಸವವನ್ನು ಮತ್ತಷ್ಟು ಮೆರಗುಗೊಳಿಸಲು ಜಿಲ್ಲಾಡಳಿತದ ವತಿಯಿಂದ ಈ ವರ್ಷ ಮೊದಲ ಬಾರಿಗೆ ತುಮಕೂರು ದಸರಾ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಉತ್ಸವದ ಯಶಸ್ವಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

    ತುಮಕೂರು ದಸರಾ ಉತ್ಸವದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಕ್ರೀಡೆಯ ಹಿರಿಮೆಯನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ದಸರಾ ಸಾಂಸ್ಕೃತಿಕ ಹಬ್ಬವನ್ನು ಪಕ್ಷಬೇಧವಿಲ್ಲದೆ ಜಿಲ್ಲೆಯ ಶಾಸಕರು, ಸಂಸದರು, ಸಚಿವರು ಸೇರಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಒಗ್ಗೂಡಿ ಆಚರಿಸಬೇಕೆಂದರಲ್ಲದೆ ದಸರಾ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಬಹುದಾದ ಧಾರ್ಮಿಕ ಆಚರಣೆ, ಜಂಬೂಸವಾರಿ, ಸಾಹಿತ್ಯ–ಕಲೆ–ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

    ದಸರಾ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಜನಾಕರ್ಷಿಸುವಂತಹ ಮೆರವಣಿಗೆಯನ್ನು ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವಂತಹ ಕಲಾತಂಡಗಳು ಕಲಾ ಪ್ರದರ್ಶನ ನೀಡಬೇಕು. ವಿವಿಧ ದೇವರುಗಳ ಉತ್ಸವ ಮೂರ್ತಿಗಳು ಪಾಲ್ಗೊಂಡು ಅರ್ಥಪೂರ್ಣ ಆಚರಣೆಯಾಗಬೇಕು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ದಸರಾ ಉತ್ಸವದ ಮುಖ್ಯ ವೇದಿಕೆಯನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಯೋಜಿಸಲಾಗಿದ್ದು, ಸಿದ್ಧಪಡಿಸಿರುವ ದಸರಾ ಉತ್ಸವದ ರೂಪು–ರೇಷೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

    ತುಮಕೂರು ದಸರಾ ಯಶಸ್ವಿಗಾಗಿ ಸ್ವಾಗತ, ಆಹ್ವಾನ ಪತ್ರಿಕೆ ಮತ್ತು ವೇದಿಕೆ ಸಮಿತಿ, ಮೆರವಣಿಗೆ ಸಮಿತಿ(ಸ್ತಬ್ದಚಿತ್ರಗಳ ಮೆರವಣಿಗೆ ಒಳಗೊಂಡಂತೆ), ಗ್ರಾಮೀಣ ದಸರಾ(ರೈತ ದಸರಾ) ಸಮಿತಿ, ಕ್ರೀಡಾ ದಸರಾ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿ, ದೀಪಾಲಂಕಾರ ಸಮಿತಿ, ಕವಿಗೋಷ್ಠಿ ದಸರಾ ಸಮಿತಿ, ಮಹಿಳಾ ಮತ್ತು ಮಕ್ಕಳ ದಸರಾ ಸಮಿತಿ, ಆಹಾರ ಮೇಳ ಸಮಿತಿ, ಸ್ವಚ್ಛತೆ ಮತ್ತು ವ್ಯವಸ್ಥೆ ಸಮಿತಿ ಸೇರಿದಂತೆ ಇತರೆ ಸಮಿತಿಗಳನ್ನು ರಚಿಸಲಾಗಿದ್ದು, ಅಕ್ಟೋಬರ್ 11 ಹಾಗೂ 12ರಂದು ಹಮ್ಮಿಕೊಂಡಿರುವ ಮಿನಿ ಮ್ಯಾರಥಾನ್, ಮಹಿಳಾ ದಸರಾ, ಯುವ ದಸರಾ, ಮಕ್ಕಳ ದಸರಾ, ವಸ್ತುಪ್ರದರ್ಶನ, ಕವಿಗೋಷ್ಠಿ, ತೆಪ್ಪೋತ್ಸವ, ಸ್ತಬ್ಧಚಿತ್ರ ಮೆರವಣಿಗೆ, ಪಂಜಿನ ಕವಾಯಿತು, ಕ್ರೀಡಾ ಸ್ಪರ್ಧೆ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ, ರೈತ ದಸರಾ, ದೀಪಾಲಂಕಾರ, ಆಹಾರ ಮೇಳ, ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 15ರಂದು ದಸರಾ ಉತ್ಸವದ ಲಾಂಛನ(ಲೋಗೋ)ವನ್ನು ಬಿಡುಗಡೆ ಮಾಡಲಾಗುವುದೆಂದು ಮಾಹಿತಿ ನೀಡಿದರು.

    ತುಮಕೂರು ದಸರಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನೃತ್ಯರೂಪಕ, ಚಿತ್ರನಟ–ನಟಿ, ಪ್ರಸಿದ್ಧ ಗಾಯಕ, ಜಿಲ್ಲೆಯ ಹಿನ್ನೆಲೆಯುಳ್ಳ ಕಲಾವಿದರನ್ನು ಕರೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

    ಸಭೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಸುರೇಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಆಸ್ತಿದಾರರು ತಮ್ಮ ಸ್ಥಿರಾಸ್ತಿಗಳನ್ನು ಜಿಲ್ಲಾ ವ್ಯಾಪ್ತಿಯ ಯಾವುದೇ ಉಪನೋಂದಣಾ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳುವ ಬಗ್ಗೆ ಸ್ಥಾಪಿಸಿರುವ ಎನಿವೇರ್ ನೋಂದಣಿ ಸಹಾಯವಾಣಿ ಸಂಖ್ಯೆಯ 080–68265316ನ್ನೊಳಗೊಂಡ ಪೋಸ್ಟರ್ ಹಾಗೂ ರೇಷ್ಮೆ ಬೆಳೆಯನ್ನು ಬಾಧಿಸುವ ಕೀಟ ನಿರ್ವಹಣಾ ವಿಧಾನದ ಬಗ್ಗೆ ರೇಷ್ಮೆ ಇಲಾಖೆಯಿಂದ ಹೊರತಂದಿರುವ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.

    ಸಭೆಯ ನಂತರ ಸಚಿವರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ಸರಗೂರು: ಸ್ತನ್ಯಪಾನದಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯ ಸುಧಾರಣೆಗೆ ಇದು ಅತ್ಯಂತ ಅಗತ್ಯವಾಗಿದೆ.…

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.