ಗುಜರಾತ್: ಭಾರತೀಯ ಕೋಸ್ಟ್ ಗಾರ್ಡ್ ನ ಹೆಲಿಕಾಪ್ಟರ್ ಗುಜರಾತ್ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅದರಲ್ಲಿದ್ದ ಇಬ್ಬರು ಪೈಲಟ್ ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಒಬ್ಬ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಯನ್ನು ಹುಡುಕಾಟ ನಡೆಸಲಾಗುತ್ತಿದೆ.
ಹೆಲಿಕಾಪ್ಟರ್ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q