ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಸಂಸ್ಥೆಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ ಅವರು ಸೋಮವಾರ ಆರೋಪಿಸಿದ್ದಾರೆ.
ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಕಲಬುರಗಿಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ತ್ವಶಾಸ್ತ್ರದ ಇಂಟರ್ ನ್ಯಾಶನಲ್ ಇನ್ ಸ್ಟಿಟ್ಯೂಟ್ ಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಹೊಸ ದಾಖಲೆಗಳು ಬಹಿರಂಗಪಡಿಸುತ್ತಿವೆ. ಈ ಕುರಿತು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಒತ್ತಾಯಿಸಿದ್ದಾರೆ.
ಅದರ ಟ್ರಸ್ಟಿಗಳಲ್ಲಿ ಖರ್ಗೆ ಅವರ ಪತ್ನಿ, ಅಳಿಯ ಮತ್ತು ಇಬ್ಬರು ಪುತ್ರರು ಇದ್ದಾರೆ. ಖರ್ಗೆ ಅವರ ಅಳಿಯ ಹಾಗೂ ಹಾಲಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಪಾಲಿ ಸಂಸ್ಥೆಯ ಕಾರ್ಯದರ್ಶಿಯಾಗಿದ್ದಾರೆ ಎಂದು ಸಿರೋಯಾ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


