ತುಮಕೂರು: ಸರ್ಕಾರವು ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆಯ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆರ್ಥಿಕ ವರ್ಷದ ಪ್ರಾರಂಭವಾದ 30 ದಿನಗಳೊಳಗೆ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಿದ್ದು, ಈ ಅವಧಿಯನ್ನು ಸೆಪ್ಟೆಂಬರ್ 14ರವರೆಗೆ ವಿಸ್ತರಿಸಿದೆ.
ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆಯಾಗಿರುವ ಬಗ್ಗೆ ಕರಪತ್ರಗಳನ್ನು ಹಂಚಲು, ಕಸದ ಗಾಡಿಗಳಲ್ಲಿ ಪ್ರಚುರಪಡಿಸಲು, ನಗರದ ಎಲ್ಲಾ ಎಲ್ ಇಡಿ ಪರದೆಗಳಲ್ಲಿ ಪ್ರದರ್ಶಿಸಲು ಕ್ರಮಕೈಗೊಳ್ಳಬೇಕೆಂದು ಸ್ಥಳೀಯ ಆಡಳಿತ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q