ತುಮಕೂರು: ಮೈಕ್ರೋ ಫೈನಾನ್ಸ್ ವಿರುದ್ಧ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಮೈಕ್ರೋ ಫೈನಾನ್ಸ್ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ತಾಲೂಕು ಕೇಂದ್ರದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ನೀಡುವ ನೆಪದಲ್ಲಿ ಗ್ರಾಮೀಣ ಜನರಿಗೆ ಮಾನಸಿಕ ಕಿರುಕುಳ ನೀಡುತ್ತಿವೆ. ಇವರ ಕಿರುಕುಳದಿಂದ ಈಗಾಗಲೇ ಕೆಲವರು ಊರು ಬಿಟ್ಟಿದ್ದಾರೆ ಮತ್ತೆ ಕೆಲವು ಪ್ರಾಣ ಬಿಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಸಾರ್ವಜನಿಕರು ಮನವಿ ಮನವಿ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q