nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹತ್ವಾಕಾಂಕ್ಷಿ ಜಿಲ್ಲೆ ಯಾದಗಿರಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡಿ: ಕೇಂದ್ರ ಸಚಿವ ವಿ.ಸೋಮಣ್ಣ
    ರಾಜ್ಯ ಸುದ್ದಿ September 4, 2024

    ಮಹತ್ವಾಕಾಂಕ್ಷಿ ಜಿಲ್ಲೆ ಯಾದಗಿರಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡಿ: ಕೇಂದ್ರ ಸಚಿವ ವಿ.ಸೋಮಣ್ಣ

    By adminSeptember 4, 2024No Comments3 Mins Read
    somannna

    ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ಆಯ್ಕೆಯಾಗಿರುವ ಯಾದಗಿರಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ಬರುವಂತೆ ನೋಡಿಕೊಳ್ಳಲು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

    ವಡಿಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇಂದು ಸಂಪೂರ್ಣತಾ ಅಭಿಯಾನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

    ರಾಷ್ಟ್ರದ 112 ಜಿಲ್ಲೆಗಳನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಆಯ್ಕೆ ಮಾಡಿದ್ದು ಅದರಲ್ಲಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆ ಕೂಡ ಇವೆ. ಈ ಹಿನ್ನಲೆಯಲ್ಲಿ ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ, ಕುಡಿಯುವ ನೀರು, ಕೃಷಿ ಇಲಾಖೆ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ತರಲು ಪ್ರಯತ್ನಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡುವಂತೆ ಅವರು ಸಲಹೆ ನೀಡಿದರು.

    ಜಿಲ್ಲೆಯಲ್ಲಿ 7 ಸಾವಿರ ಶಿಕ್ಷಕರ ಪೈಕಿ ಕೇವಲ 3 ಸಾವಿರ ಶಿಕ್ಷಕರ ಗುರಿ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ವಿನಂತಿಸುವುದಾಗಿ ತಿಳಿಸಿದ ಅವರು ತಕ್ಷಣ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ಇಲಾಖೆ ಆಯುಕ್ತರಿಗೆ ಖುದ್ದಾಗಿ ಭೇಟಿ ನೀಡಿ ಶಿಕ್ಷಕರ ಕೊರತೆ ನೀಗಿಸಲು ನನ್ನೊಂದಿಗೆ ಸಮನ್ವಯತೆ ಸಾಧಿಸಬೇಕು. ಅದರಂತೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ಅವಶ್ಯಕತೆ ತೀರ ಇರುವುದರಿಂದ ನೇಮಕಾತಿ ನಡೆಯುವ ಅಗತ್ಯವಿದೆ ಎಂದು ಹೇಳಿದರು.
    ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವಂತಹ ಕೂಲಿಕಾರರ ಮಕ್ಕಳಿಗೆ ನೋಡಿಕೊಳ್ಳಲು ಕೂಸಿನ ಮನೆ ಸೌಲಭ್ಯ ಇಲ್ಲಿ ಇದ್ದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಈ ಮಕ್ಕಳ ಆರೈಕೆ ನೋಡಿಕೊಳ್ಳುತ್ತಿರುವುದರಿಂದ ಅವರಿಗೆ ಕನಿಷ್ಠ ಸಂಬಳ ನಿಗದಿಪಡಿಸುವ ಅವಶ್ಯಕತೆ ಇದ್ದು ಈ ಕುರಿತಂತೆ ಕೇಂದ್ರ ಸರ್ಕಾರದ ಗಮನಕ್ಕೂ ತರಲಾಗುವುದು ಎಂದು ಹೇಳಿದರು.

    ರೈತರ ಸಮಗ್ರ ಅಭಿವೃದ್ಧಿಗೆ ನೆರವಾಗುವ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಇಲಾಖೆಗೆ ಅವಶ್ಯಕ ಅನುದಾನ ನೀಡುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿ ರೈತರ ಜೀವನ ಸುಧಾರಣೆಯಾಗಬೇಕು. ರೈತಾಪಿ ಜನರ ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು. ಪ್ರತಿ ರೈತರಿಗಾಗಿ ಇರುವಂತಹ ಮಣ್ಣಿನ ಸತ್ವ ಪರೀಕ್ಷೆ, ಯೋಜನೆಗಳ ಲಾಭ ದೊರಕಿಸುವಂತೆ ಅವರು ಸಲಹೆ ನೀಡಿದರು.

    ಭಾರತದ ಉತ್ತಮ ಭವಿಷ್ಯಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕರು, ಆಹಾರ ಇಲಾಖೆಯ ಅಧಿಕಾರಿಗಳು ಪೌಷ್ಟಿಕಾಂಶವುಳ್ಳ ಆಹಾರವನ್ನು ಪ್ರಾಮಾಣಿಕವಾಗಿ ತಲುಪಿಸುವಂತೆ ಸೂಚಿಸಿದ ಅವರು ಕುಡಿಯುವ ನೀರು , ರಸ್ತೆ, ಬೀದಿ ದೀಪ, ಮೂಲಸೌಕರ್ಯಗಳ ಸವಲತ್ತುಗಳನ್ನು ಆದ್ಯತೆ ಮೇಲೆ ತಲುಪಿಸುವಂತೆ ಸೂಚನೆ ನೀಡಿದರು.

    ಅದರಂತೆ ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆ ಪಾಲನೆ ಸೇರಿದಂತೆ ವಿವಿಧ ಯೋಜನೆಗಳ ಅಡಿ ನೀಡಲಾಗುವ ಪ್ರೋತ್ಸಾಹ ಧನ ಸೌಲಭ್ಯವನ್ನು ಆದ್ಯತೆ ಮೇಲೆ ತಲುಪಿಸಬೇಕು. ಬಡ ಜನರು ಈ ಎಲ್ಲ ಇಲಾಖೆಗಳ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಿರುವುದರಿಂದ ಸಕಾಲಕ್ಕೆ ಅವರಿಗೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

    ಪ್ರಧಾನ ಮಂತ್ರಿಗಳ ನಿರೀಕ್ಷೆಯಂತೆ ಸಬ್ ಕಾ ಸಾಥ್– ಸಬ್ ಕಾ ವಿಕಾಸ್ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು ಯಾದಗಿರಿ ಜಿಲ್ಲೆಯನ್ನು ಮಹತ್ವಕಾಂಕ್ಷಿ ಜಿಲ್ಲೆಯಾಗಿ ಆಯ್ಕೆ ಮಾಡಿರುವುದರಿಂದ ಸದ್ಯ ಅಭಿವೃದ್ಧಿ ಸೂಚ್ಯಂಕದಲ್ಲಿ 77 ನೇ ಸ್ಥಾನದಲ್ಲಿರುವುದರಿಂದ ಮುಂಚೂಣಿಗೆ ತರಲು ಪ್ರಯತ್ನಿಸಬೇಕು.

    ಗರ್ಭಿಣಿ ಮಹಿಳೆಯರ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ತಗ್ಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನರ ಜೀವನದಲ್ಲಿ ಯಾವ ರೀತಿ ಬದಲಾವಣೆ ತರಬೇಕು ಎಂಬುದು ಅಧಿಕಾರಿಗಳು ನಿರ್ಧರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಪ್ರತಿ ಶಾಲೆಗೆ ವಿದ್ಯುತ್ ಸೌಲಭ್ಯ ಇರುವಂತೆ ಹಾಗೂ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

    ಸಚಿವರು ಇದೆ ಸಂದರ್ಭದಲ್ಲಿ ಸ್ವಸಹಾಯ ಸಂಘಗಳಿಗೆ ಸುತ್ತುನಿಧಿ , ಮಣ್ಣು ಆರೋಗ್ಯ ಪರೀಕ್ಷೆ ಚೀಟಿ ವಿತರಿಸಿದರು. ಗರ್ಭಿಣಿ ಬಾಣಂತಿಯರಿಗೆ ಸೀಮಾಂತ ಕಾರ್ಯಕ್ರಮ ನೆರವೇರಿಸಿಕೊಟ್ಟರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಪ್ರಾಸ್ತಾವಿಕ ಮಾತನಾಡಿ 2018 ರಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರದ 112 ಜಿಲ್ಲೆಗಳನ್ನು ಸೂಚ್ಯಂಕ ಆಧಾರದಲ್ಲಿ ಮಹತ್ವಕಾಂಕ್ಷಿ ಜಿಲ್ಲೆಯಾಗಿ ಆಯ್ಕೆ ಮಾಡಿದ್ದು ಈ ಹಿನ್ನೆಲೆಯಲ್ಲಿ ವಡಿಗೇರಾ ಮಹತ್ವಾಕಾಂಕ್ಷಿ ಬ್ಲಾಕ್ ಎಂದು ಘೋಷಣೆ ಮಾಡಿದ್ದು, ಶೇಕಡಾ 100 ರಷ್ಟು ಪ್ರಗತಿ ಸಾಧಿಸಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ದಿಶೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

    ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ:

    ಇದೇ ಸಚಿವರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾಲ್ಕು ಎಕರೆ ಪ್ರದೇಶದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು ಸಂಬಂಧಿಸಿದ ಅಧಿಕಾರಿಗಳು ಅವಶ್ಯಕ ಕ್ರಮ ಕೈಗೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುದಾನ ನೀಡುತ್ತಿರುವುದರಿಂದ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಈ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕಾಂಕ್ರೀಟ್ ಸಸಿಗಳನ್ನು ಬೆಳೆಸಲು ಗಮನ ನೀಡಬೇಕು. ಹೊಸ ಕಟ್ಟಡ ನಿರ್ಮಾಣ ಆದ ನಂತರ ಹಳೆಯ ಕಟ್ಟಡ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಚಿವರು ಇದೇ ಸಂದರ್ಭದಲ್ಲಿ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ರೋಗಿಗಳ ಆರೋಗ್ಯ ವಿಚಾರಣೆ ಮಾಡಿದರು.

    ಈ ಸಂದರ್ಭದಲ್ಲಿ ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ತಡಿಬಿಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾರೆಡ್ಡಿ, ಡಿಡಿಪಿಐ ಮಂಜುನಾಥ, ಡಿಹೆಚ್ ಓ ಡಾ.ಎಮ್.ಎಸ್.ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಬಂತೆಂದರೆ ದುರ್ಗಾದೇವಿಯ ಆರಾಧನೆಯ ಜೊತೆಗೆ ಬಣ್ಣಬಣ್ಣದ ಉಡುಪುಗಳು, ಸಂಗೀತದ ಲಯಕ್ಕೆ ಹೆಜ್ಜೆ ಹಾಕುವ ಗರ್ಬಾ ನೃತ್ಯವೂ ಗಮನ ಸೆಳೆಯುತ್ತದೆ.…

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.