nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಅಭಿವೃದ್ದಿಗೆ ಶಿಕ್ಷಕರೇ ಕಾರಣ : ಸಚಿವ ಮಂಕಾಳ ವೈದ್ಯ
    ಜಿಲ್ಲಾ ಸುದ್ದಿ September 6, 2024

    ದೇಶದ ಅಭಿವೃದ್ದಿಗೆ ಶಿಕ್ಷಕರೇ ಕಾರಣ : ಸಚಿವ ಮಂಕಾಳ ವೈದ್ಯ

    By adminSeptember 6, 2024No Comments2 Mins Read
    karavara

    ಕಾರವಾರ: ದೇಶದ ಅಭಿವೃದ್ಧಿ ರಾಜಕಾರಣಿಗಳಿಂದ, ಬೇರೆ ಬೇರೆ ವ್ಯವಸ್ಥೆಯಿಂದ ಆಗಿದೆ ಎಂದು ಅಂದುಕೊAಡಿದ್ದರೆ ಅದು ತಪ್ಪು, ದೇಶದ ಅಭಿವೃದ್ಧಿಗೆ ನಿಜವಾಗಿಯೂ ಕಾರಣರಾದವರು ಶಿಕ್ಷಕರು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್. ವೈದ್ಯ ಹೇಳಿದರು.

    ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ, ಲಯನ್ಸ್ ಕ್ಲಬ್ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರದ ಮೂಡಗಣಪತಿ ಸಬಾಭವನದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣರವರ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಏರಿದರು, ತನಗೆ ವಿದ್ಯೆ ಕಲಿಸಿದ ಶಿಕ್ಷಕರಿಗೆ ತಲೆ ಬಾಗುತ್ತಾನೆ, ಕೈ ಮುಗಿಯುತ್ತಾನೆ. ಶಿಕ್ಷಕರಿಗೆ ದೇಶದ ಮೂಲೆ ಮೂಲೆಯಲ್ಲಿಯು ಆಸ್ತಿ ಇದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳೆಲ್ಲಾ ಅವರಿಗೆ ವಿದ್ಯಾರ್ಥಿಗಳಾಗಿದ್ದು, ಅವರದೇ ಆಸ್ತಿಯಾಗಿದ್ದಾರೆ. ಶಿಕ್ಷಕರು ಯಾವಾಗಲು ಗುರುಗಳೇ ಆಗಿದ್ದು, ನಿವೃತ್ತಿ ನಂತರವು ಗುರುಗಳೇ ಆಗಿರುತ್ತಾರೆ. ಶಿಕ್ಷಣದಂತಹ ಪುಣ್ಯದ ಕೆಲಸದಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, ಇದು ಮರೆಯಲಾಗದ ಕ್ಷೇತ್ರ. ಶಿಕ್ಷಕರ ವೃತ್ತಿಯಲ್ಲಿ ಗೌರವವಿದೆ, ಶಕ್ತಿ ಇದೆ ಎಂದರು.

    ಜಿಲ್ಲೆಯಲ್ಲಿ ತಮ್ಮ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದೇನೆ. ಮುಂದೆ ಕೂಡ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ಕೊಡುತ್ತೇನೆ. ಶಿಕ್ಷಕರ ಸಲಹೆ ಸೂಚನೆ ಮಾರ್ಗದರ್ಶನ ಸದಾ ಬೇಕು. ದೇಶ, ರಾಜ್ಯ, ಊರು ಸಮೃದ್ಧಿಯಾಗಿ ಬೆಳೆಯಲು ಶಿಕ್ಷಕರು ಕಾರಣ, ನಾವು ಇಂದು ಇಷ್ಟು ಎತ್ತರಕ್ಕೆ ಬೆಳೆಯಲು, ಇಲ್ಲಿ ನಿಂತು ಮಾತನಾಡಲು ಶಿಕ್ಷಕರೆ ಕಾರಣಿಕರ್ತರಾಗಿದ್ದಾರೆ ಎಂದು ಸಚಿವರು ಹೇಳಿದರು.

    ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಸಮಾಜದಲ್ಲಿ ಶಿಕ್ಷಕರಿಗೆ ಬಹು ದೊಡ್ಡ ಜವಾಬ್ದಾರಿ ಇದೆ. ಮಕ್ಕಳು ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುವ ರೀತಿ ಅವರನ್ನು ವಿದ್ಯಾಭ್ಯಾಸದ ಸಮಯದಲ್ಲೇ ಶಿಕ್ಷಕರು ಮಾರ್ಪಡಿಸಬೇಕು. ಯಾವುದೇ ಸಮಸ್ಯೆಗಳನ್ನು ಎದುರಿಸುವ ರೀತಿಯಲ್ಲಿ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡುವಂತಾಗಬೇಕು, ಮಕ್ಕಳು ಪಾಲಕರಿಗಿಂತ ಶಿಕ್ಷಕರ ಮಾತನ್ನು ತಪ್ಪದೇ ಪಾಲಿಸುತ್ತಾರೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪ್ರಾರಂಭದಲ್ಲಿಯೇ ಸಂಸ್ಕಾರಯುತ ವಿದ್ಯಾರ್ಥಿಗಳಾದರೆ, ಮುಂದೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದರು.

    ಪ.ಪಂ.ಅಧ್ಯಕ್ಷ ನಾಗರಾಜ್ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಕುಮಟಾ ಡಯಟ್ನ ಉಪ ನಿರ್ದೇಶಕ ಜಿ.ಎಸ್. ಭಟ್ಟ, ಜಿ.ಪಂ. ಮುಖ್ಯ ಯೋಜನಾಧಿಕಾರಿ ವಿನೋದ ಅನ್ವೇಕರ, ತಹಸೀಲ್ದಾರ್ ರವಿರಾಜ್ ದೀಕ್ಷಿತ್, ಹೊನ್ನಾವರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಮತ್ತಿತರರು ಇದ್ದರು.

    ಕಾರವಾರ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಅತ್ತ್ಯುತ್ತಮ ಪ್ರಶಸ್ತಿ ಪಡೆದ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಕರಿಗೆ, ನಿವೃತ್ತ ಶಿಕ್ಷಕರಿಗೆ ಮತ್ತು ಕಳೆದ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು.

    ಡಿಡಿಪಿಐ ಲತಾ ನಾಯ್ಕ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ. ನಾಯ್ಕ್ ವಂದಿಸಿದರು. ಸಹ ಶಿಕ್ಷಕರರಾದ ಸುದೇಶ್ ನಾಯ್ಕ ಹಾಗೂ ಪ್ರಕಾಶ್ ನಾಯ್ಕ್ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.