ಪಾವಗಡ: ತಾಲೂಕಿನಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪಾವಗಡ ತಾಲೂಕಿನಲ್ಲಿ ಹೆಚ್ಚಾಗಿ ಮಳೆ ಬಂದಂತಹ ಸಂದರ್ಭದಲ್ಲಿ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುವುದರಿಂದ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಳೆ ಹಾನಿಯಾದ 20 ರೈತರ ಪಟ್ಟಿಯನ್ನು ತಹಶೀಲ್ದಾರ್/ಗ್ರಾಮ ಪಂಚಾಯತಿ/ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ 3 ರಿಂದು ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್/ತೋಟಗಾರಿಕೆ ಇಲಾಖೆಗಳ ತಾಲ್ಲೂಕು ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬೇಕು. ಜೊತೆಗೆ ಪಟ್ಟಿಯಿಂದ ಯಾರಾದರೂ ಬಿಟ್ಟು ಹೋದಲ್ಲಿ ಅವರು ಸೂಕ್ತ ದಾಖಲೆಗಳೊಂದಿಗೆ ಮೇಲಿನ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪಾವಗಡ ತಹಶೀಲ್ದಾರ್ ಹಾಗೂ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಿ ಎನ್ ವರದರಾಜು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ್ ಗ್ರೇಡ್ ಟು ತಹಶೀಲ್ದಾರ್ ಎನ್ ಮೂರ್ತಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್ ಗೌಡ ಹಾಜರಿದ್ದರು
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q