ತುಮಕೂರು: ಪಟ್ಟಣದ ಬಿ.ಹೆಚ್. ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಟಿಸಿಎಚ್ ಬಿಎಡ್ ಹಾಸ್ಟೆಲ್ ಗೆ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿನಿಯರಿಂದ ಅವರು ಅಭಿಪ್ರಾಯಪಡೆದುಕೊಂಡರು.
ಹಾಸ್ಟೆಲ್ ನಲ್ಲಿ ಊಟ, ತಿಂಡಿ ಉತ್ತಮ ಗುಣಮಟ್ಟದಲ್ಲಿ ಕೊಡುತ್ತಿದ್ದಾರೆ. ಗೀಸರ್ ವ್ಯವಸ್ಥೆ ಕೂಡ ಮಾಡಿಕೊಟ್ಟಿದ್ದಾರೆ ಎಂದು ವಿದ್ಯಾರ್ಥಿನಿಯರು ನ್ಯಾಯಮೂರ್ತಿಗಳಿಗೆ ತಿಳಿಸಿದರು.
ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ನಿರ್ಮಾಣ, ಶಿಸ್ತು, ಆರೋಗ್ಯ, ಸಂವಿಧಾನ ಇತ್ಯಾದಿ ವಿಚಾರಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳನ್ನ ಕರೆಸಿ ತಿಳುವಳಿಕೆ ಕಾರ್ಯಕ್ರಮವನ್ನ ಮೂಡಿಸ ಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ನ್ಯಾಯಮೂರ್ತಿಗಳು ಸೂಚನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


