ನವದೆಹಲಿ: ಭಾರತದ ಖ್ಯಾತ ರೆಸ್ಲರ್ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಅವರು, ಶುಕ್ರವಾರ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ನಾಯಕ ಪವನ್ ಖೇರಾ, ಹರ್ಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಮತ್ತು ಹರಿಯಾಣದ ಎಐಸಿಸಿ ಉಸ್ತುವಾರಿ ದೀಪಕ್ ಬಬಾರಿಯಾ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಕಷ್ಟದ ಸಮಯದಲ್ಲೇ ನಮ್ಮವರು ಯಾರು ಎಂದು ತಿಳಿಯುತ್ತದೆ. ನಮ್ಮನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುವಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮೊಂದಿಗೆ ಇದ್ದವು. ಮಹಿಳೆಯರೊಂದಿಗೆ ನಿಲ್ಲುವ ಮತ್ತು ‘ಸಡಕ್ನಿಂದ ಸಂಸದ್’ಗೆ ಹೋರಾಡಲು ಸಿದ್ಧವಾಗಿರುವ ಪಕ್ಷಕ್ಕೆ ನಾನು ಸೇರಿದ್ದೇನೆ ಎಂದು ನನಗೆ ಹೆಮ್ಮೆ ಇದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296