ಬೆಳಗಾವಿ: ರಾಯಚೂರು ಹೆದ್ದಾರಿಯ ಕಮತಗಿ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಅಮರೇಶ ಬೆನಕನಾಳಮಠ(24), ಶರಣಯ್ಯ ಬೆನಕನಾಳಮಠ(14) ಮೃತ ಪಟ್ಟವರು ಅಂತ ತಿಳಿದು ಬಂದಿದೆ. ಇವರು ಇಳಕಲ್ ನಗರದ ಓಂಕಾರ ಟಾಕೀಜ್ ಸಮೀಪದ ನಿವಾಸಿಗಳು ಎಂದು ತಿಳಿದು ಬಂದಿದೆ.
ಗಣೇಶ ಚುತುರ್ಥಿ ಹಬ್ಬಕ್ಕೆಂದು ತಮ್ಮನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಮೀನಗಡ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296