ಚೆನ್ನೈ: ಬಸ್ ಗೆ ಕಾಯುತ್ತಿದ್ದ ಮಹಿಳೆಗೆ ಲಿಫ್ಟ್ ಕೊಟ್ಟ ಇಬ್ಬರು ಯುವಕರು ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ.
ಸೆ.3ರಂದು ಕೆಲಸಕ್ಕೆ ತೆರಳಿದ್ದ 47 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯೊಬ್ಬರು ರಾತ್ರಿ ಮನೆಗೆ ತೆರಳಲು ಪುತ್ತಲೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದರು.
ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದಿದ್ದ ರಾಯಂದೂರಿನ ಪ್ರವೀಣ್ (32) ಹಾಗೂ ರಾಜಕಪ್ಪೂರ್ (26) ಲಿಫ್ಟ್ ಕೊಡುವುದಾಗಿ ಹೇಳಿದ್ದಾರೆ. ಪ್ರವೀಣ್ ನ ಬೈಕ್ ನಲ್ಲಿ ಮಹಿಳೆ ತೆರಳಿದ್ದಾರೆ. ಇನ್ನೊಂದು ಬೈಕ್ ನಲ್ಲಿ ರಾಜಕಪ್ಪೂರ್ ಹಿಂಬಾಲಿಸಿದ್ದಾನೆ.
ಪುತ್ತಲೂರು ದಾಟಿದ ನಂತರ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿದ ಕಾಮುಕರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.
ಸದ್ಯ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296