ಮುಂಬೈ: ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಇದಕ್ಕೆ ಕಾರಣ ಏನಂದ್ರೆ, ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ 20 ಕೆಜಿ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ.
ಮುಂಬೈನ ದೊಡ್ಡ ದೊಡ್ಡ ಉದ್ಯಮಿಗಳು, ಚಲನ ಚಿತ್ರ ನಟ, ನಟಿಯರು, ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ. ಒಟ್ಟು 10 ದಿನಗಳ ಕಾಲ ಅದ್ದೂರಿಯಾಗಿ ಗಣೇಶನ ಹಬ್ಬ ಆಚರಣೆ ನಡೆಯುತ್ತದೆ.
ಮದುವೆಯಾದ ಬಳಿಕ ಅನಂತ್ ಅಂಬಾನಿ ದಂಪತಿಯ ಮೊದಲ ಚೌತಿ ಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಗಣೇಶನಿಗೆ 20 ಕೆಜಿ ಚಿನ್ನದ ಕಿರೀಟವನ್ನು ದಂಪತಿಗಳು ಕಾಣಿಕೆಯಾಗಿ ನೀಡಿ ದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296