ಬೆಳಗಾವಿ: ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಿಸುತ್ತೇನೆ ಎಂದು ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರರ ಪಶ್ನೆಗಳಿಗೆ ಉತ್ತರಿಸಿದ ಅವರು, ಬೆಳಗಾವಿ ಜಿಲ್ಲೆಯ ಯಾರೇ ಮುಖ್ಯಮಂತ್ರಿಯಾದರೂ ನಾನು ಸ್ವಾಗತಿಸುತ್ತೇನೆ, ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿದೆ ಎಂದು ತಿಳಿಸಿದರು.
ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ಲಕ್ಷ್ಮಣ್ ಸವದಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಸಚಿವ ಸ್ಥಾನ ಅವರಿಗೆ ಇನ್ನೂ ಸಿಕ್ಕಿಲ್ಲ. ಈ ನಡುವೆ ಸತೀಶ್ ಜಾರಕಿಹೊಳಿ ಸಿಎಂ ಆಗೋದಾದ್ರೆ ನನ್ನ ಬೆಂಬಲವಿದೆ. ಬೆಳಗಾವಿಯವರು ಯಾರೇ ಸಿಎಂ ಆಗುವುದಿದ್ದರೂ ನನ್ನ ಬೆಂಬಲವಿದೆ ಅಂತ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವ ಸಂದರ್ಭದಲ್ಲೇ ಸತೀಶ್ ಜಾರಕಿಹೊಳಿ ತೆರೆಮರೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಟವಲ್ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ ಬೆಳಗಾವಿ ಜಿಲ್ಲೆಯಿಂದ ಯಾರೇ ಸಿಎಂ ಆದರೂ ನನ್ನ ಬೆಂಬಲವಿದೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


