ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ಸೇರ್ಪಡೆಯಾದ ಬಳಿಕ ಪಿಪಿಸಿ ಅಕೌಂಟ್ ನಲ್ಲಿ ಎಷ್ಟು ಹಣ ಖರ್ಚು ಮಾಡಿದ್ದಾರೆ ಎನ್ನುವ ಮಾಹಿತಿ ವರದಿಯಾಗಿದೆ.
ಕಳೆದ 9 ದಿನಗಳಲ್ಲಿ ದರ್ಶನ್ 735 ರೂಪಾಯಿ ಹಣವನ್ನು ಖರ್ಚು ಮಾಡಿದ್ದಾರೆ. ಈ ಪೈಕಿ ಬಹುತೇಕ ಹಣವನ್ನು ಕಾಫಿ, ಟೀಗಾಗಿ ಖರ್ಚು ಮಾಡಿದ್ದಾರೆ ಎಂದು ಜೈಲು ಕ್ಯಾಂಟೀನ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ರೌಂಡ್ ಟೇಬಲ್ ಪಾರ್ಟಿ ಮಾಡಿದ್ದರು. ಕೈಯಲ್ಲಿ ಸಿಗರೇಟ್, ಇನ್ನೊಂದು ಕೈಯಲ್ಲಿ ಕಾಫಿ ಮಗ್ ಹಿಡಿದುಕೊಂಡು ಬಿಂದಾಸ್ ಆಗಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರು.
ವಿಐಪಿ ಸೆಲ್ ನಿಂದ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


