ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ವೀರ್ ಸಿಂಗ್ ಪೋಷಕರಾಗಿದ್ದಾರೆ. ದೀಪಿಕಾ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆಯಷ್ಟೇ ದೀಪಿಕಾ ಪಡುಕೋಣೆ ಮುಂಬೈನ ಅಂಬಾನಿ ಮಾಲೀಕತ್ವದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 28ರಂದು ದೀಪಿಕಾಗೆ ಡೆಲಿವರಿ ಡೇಟ್ ಇತ್ತು.
ನಿಗದಿಗಿಂತ 20 ದಿನ ಮೊದಲೇ ದೀಪಿಕಾ ರಣ್ವೀರ್ ಮನೆಗೆ ಗೌರಿಯ ಆಗಮನವಾಗಿದೆ. ಒಂದು ದಿನದ ಹಿಂದಷ್ಟೇ ದೀಪಿಕಾ ಪಡುಕೋಣೆ ತಮ್ಮ ಪತಿ ರಣ್ವೀರ್ ಸಿಂಗ್ ಹಾಗೂ ಕುಟುಂಬದವರ ಜೊತೆಗೆ ಬರಿಗಾಲಿನಲ್ಲಿ ಮುಂಬೈನ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.
ಆದರೆ ಈ ಖುಷಿಯ ವಿಚಾರವನ್ನು ಇವರಿಬ್ಬರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲಿಯೂ ಪೋಸ್ಟ್ ಮಾಡಿಲ್ಲ, ಕೆಲ ದಿನಗಳ ಹಿಂದಷ್ಟೇ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರು ಜೊತೆಯಾಗಿ ಪ್ರಗ್ನೆನ್ಸಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು.
ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಫೆಬ್ರವರಿಯಲ್ಲಿ ಪ್ರಗ್ನೆನ್ಸಿ ವಿಚಾರವನ್ನು ಘೋಷಣೆ ಮಾಡಿದ್ದರು. 2018ರಲ್ಲಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರು ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈಗ ದಂಪತಿ ಹೆಣ್ಣು ಮಗುವಿಗೆ ಪೋಷಕರಾಗಿದ್ದು, ಚೊಚ್ಚಲ ಬಾರಿ ಅಪ್ಪ ಅಮ್ಮ ಆದ ದೀಪಿಕಾ ಹಾಗೂ ರಣ್ವೀರ್ ಅವರ ಜೀವನದ ಹೊಸ ಅಧ್ಯಯವೊಂದು ಈಗ ಆರಂಭವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q