ಬೆಂಗಳೂರು: ಶಿವಾಜಿ ನಗರದ ಚರ್ಚ್ ನಲ್ಲಿ ಸಂತ ಮೇರಿ ಜಯಂತೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯನವರು ಮಾತನಾಡುತ್ತಿದ್ದ ವೇಳೆ ಅಜಾನ್ ಕೇಳಿ ಬಂದಿದ್ದು, ಈ ವೇಳೆ ಸಿಎಂ 3 ನಿಮಿಷಗಳ ಕಾಲ ಭಾಷಣ ನಿಲ್ಲಿಸಿದರು.
ನಂತರ ಮಾತನಾಡುವಂತೆ ಶಾಸಕರು ಸನ್ನೆ ಮಾಡಿದ ಬಳಿಕ ಭಾಷಣ ಮುಂದುವರೆಸಿದ್ದಾರೆ. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಇದೇ ವೇಳೆ ಸಿಎಂ ಕರೆ ನೀಡಿದರು.
ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದು ಅವರು ಇದೇ ವೇಳೆ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


