ವಾಷಿಂಗ್ಟನ್: ಭಾರತದ ರಾಜಕಾರಣದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಟೆಕ್ಸಾಸ್‌ನಲ್ಲಿ ಇಂಡೊ-ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಭಾರತದ ಬಗ್ಗೆ ಏಕ ಪರಿಕಲ್ಪನೆ ಹೊಂದಿದೆ. ನಾವು ಬಹುವಿಧದ ವಿಚಾರಗಳ ಬಗ್ಗೆ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.
ಬಹುತೇಕ ಅಮೆರಿಕದಂತೆಯೇ ಪ್ರತಿಯೊಬ್ಬರಿಗೂ ಸ್ಪರ್ಧೆಗೆ ಅವಕಾಶ ಸಿಗಬೇಕೆಂದು ನಾವು ನಂಬಿದ್ದೇವೆ. ಪ್ರತಿಯೊಬ್ಬರಿಗೂ ಕನಸು ಕಾಣಲು ಅವಕಾಶ ಕೊಡಬೇಕು. ಜಾತಿ, ಭಾಷೆ, ಧರ್ಮ, ಸಂಪ್ರದಾಯ ಮತ್ತು ಇತಿಹಾಸಗಳನ್ನು ಪರಿಗಣಿಸದೆ ಪ್ರತಿಯೊಬ್ಬರಿಗೂ ಅವಕಾಶ ನೀಡಬೇಕು ಎನ್ನುವುದರ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಅವರು ಹೇಳಿದರು.
ಭಾರತದ ಪ್ರಧಾನಿ, ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂಬುದು ಜನರಿಗೆ ಅರ್ಥವಾಗಿದ್ದು, ಚುನಾವಣೆಯಲ್ಲಿ ಅದು ಬಹಿರಂಗವಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q