ದಿವ್ಯ ಸ್ಪಂದನಾ ಅಲಿಯಾಸ್ ರಮ್ಯಾ, ಕನ್ನಡ ಮಾತ್ರವಲ್ಲದೇ ಕೆಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ನಂತರ ಕಾಂಗ್ರೆಸ್‌ನಿಂದ ರಾಜಕೀಯಕ್ಕೆ ಪ್ರವೇಶಿಸಿ ಸಂಸದೆಯೂ ಆದರು. ಆದರೆ ರಾಜಕೀಯದಲ್ಲಿ ವಿಫಲರಾಗಿ ಸಂಸದೆ ಪಟ್ಟವೂ ಹೋಗಿ ಕೊನೆಗೆ ಸಿನಿಮಾ, ರಾಜಕೀಯ ಎಲ್ಲದ್ದರಿಂದಲೂ ದೂರ ಆಗಿದ್ದಾರೆ.
ಇನ್ನು ರಮ್ಯಾ ಹೆಸರು ಹೇಳಿದಾಗಲೆಲ್ಲ ಅವರ ಮದುವೆ ವಿಚಾರ ಪ್ರಸ್ತಾಪ ಆಗೇ ಆಗುತ್ತದೆ. ಏಕೆಂದರೆ, ವಯಸ್ಸು 41 ಆದರೂ ಇನ್ನು ಮದುವೆ ಆಗದೇ ಉಳಿದಿರುವುದರಿಂದ ಮದುವೆ ಯಾವಾಗ ಎಂಬ ಪ್ರಶ್ನೆ ಆಗಾಗ ಕೇಳಿಬರುತ್ತಲೇ ಇದೆ. ತಾಜಾ ಸಂಗತಿ ಏನೆಂದರೆ, ರಮ್ಯಾ ಅವರು ಸದ್ದಿಲ್ಲದೆ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಸದ್ಯಕ್ಕೆ ಭಾರಿ ಸಂಚಲನ ಮೂಡಿಸಿದೆ.
ರಮ್ಯಾ ಅವರು ಖ್ಯಾತ ಉದ್ಯಮಿಯನ್ನು ವರಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ನಿಶ್ಚಿತಾರ್ಥ ಕೂಡ ನೆರವೇರಲಿದೆಯಂತೆ. ರಮ್ಯಾ ವರಿಸಲಿರುವ ಆ ಉದ್ಯಮಿ ಯಾರೆಂಬುದು ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೆ, ಸ್ಯಾಂಡಲ್ವುಡ್ ಮೂಲಗಳ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ, ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ರಮ್ಯಾ, ಇದೊಂದು ವದಂತಿ ಎಂದು ಹೇಳಿದ್ದಾರೆ. ಪ್ರತಿಬಾರಿಯೂ ತಮ್ಮ ಮದುವೆ ಸುದ್ದಿಯನ್ನು ಅಲ್ಲಗೆಳೆಯುತ್ತಾ ಬರುತ್ತಿರುವ ರಮ್ಯಾ, ಈ ಬಾರಿಯೂ ವದಂತಿ ಎಂಬ ಉತ್ತರವನ್ನೇ ನೀಡಿದ್ದಾರೆ. ಆದರೆ, ಮೂಲಗಳ ಪ್ರಕಾರ ಉದ್ಯಮಿಯನ್ನು ಮದುವೆ ಆಗೋದು ಖಚಿತ ಎನ್ನಲಾಗುತ್ತಿದೆ. ನವೆಂಬರ್ 29ರಂದು ರಮ್ಯಾ ಅವರ ಹುಟ್ಟುಹಬ್ಬದಂದೇ ಮದುವೆ ಆಗಲಿದ್ದಾರೆ ಎನ್ನಲಾಗುತ್ತಿದೆ. ಇದು ಎಷ್ಟರಮಟ್ಟಿಗೆ ನಿಜ ಎಂಬುದನ್ನು ಕಾದು ನೋಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q