ತುಮಕೂರು: ನಿನ್ನೆ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟ ಸ್ಥಳಕ್ಕೆ ಇಂದು ಗೃಹ ಸಚಿವ ಜಿ. ಪರಮೇಶ್ವರ್ ಭೇಟಿ ನೀಡಿ ಮಾಹಿತಿ ಪಡೆದರು.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೆ ಶವಾಗಾರಕ್ಕೆ ತೆರಳಿ ಸಂತ್ರಸ್ಥರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೇ ಸಂದಭದಲ್ಲಿ ಪತ್ರಕತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಪಘಾತಗಳು, ಪ್ರಾಣ ಕಳೆದುಕೊಂಡವರ ಸಂಖ್ಯೆ. ಶೇ.50ರಷ್ಟು ಕಡಿಮೆಯಾಗಿದೆ. ರಸ್ತೆ ಅಪಘಾತಗಳ ಸಂಖ್ಯೆ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಗೃಹ ಇಲಾಖೆಯಿಂದ ಸರಕಾರಕ್ಕೆ 100 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದರು.
ರಾಜ್ಯದಲ್ಲಿ ಅಪಘಾತಗಳಿಂದ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಿಯಂತ್ರಿಸಲು ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯೊಂದಿಗೆ ಚಚಿಸಲಾಗುತ್ತಿದೆ. ಎಲ್ಲೆಲ್ಲಿ ತಿರುವುಗಳಿವೆ ಅಲ್ಲಿ ಅಪಘಾತಗಳು ಆಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.
ಮೈಸೂರು-ಬೆಂಗಳುರು ರಸ್ತೆ ನಿಮಾಣ ಮಾಡಿದ ನಂತರ ಕೇವಲ 4 ತಿಂಗಳಲ್ಲೇ 100ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಳಕಿಗೆ ಬಂದ ನಂತರ, ರಸ್ತೆ ಕಾಮಗಾರಿ ಮಾಡಿದವರನ್ನು ಕರೆಸಿ ತಾಂತ್ರಿಕ ಪರಿಣಿತರೊಂದಿಗೆ ಚಚಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ನಂತರ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ.ಚಾಲಕರಿಗೂ ಕೂಡ ತಿಳುವಳಿಕೆ ನೀಡಬೇಕಿದೆ. ಹೈ ಸ್ಪೀಡ್ ಚಾಲನೆ ಮಾಡಿದರೆ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q