ಬೆಂಗಳೂರು: ಜನಪ್ರಿಯ ನಟನ ಆಪ್ತನ ಬಂಧನವಾಗಿದ್ದು, ವ್ಯಕ್ತಿಯೊಬ್ಬನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ವಿಚಾರಣೆ ಎದುರಿಸಿದ್ದ ಅಶ್ವಿನ್‌ನನ್ನು ತನಿಖೆಯ ಮುಂದಿನ ಹಂತವಾಗಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


