ಸಿಂದಗಿ: ಬಯಲು ಬಹಿರ್ದೆಸೆಗೆ ಹೋಗಲು ರಸ್ತೆ ಮಾಡಿಕೊಡಿ ಅಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ ಘಟನೆ ಸಿಂದಗಿ ತಾಲ್ಲೂಕಿನ ಬೋರಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲ. ಹೀಗಾಗಿ ಬಯಲಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಆದ್ರೆ ರಸ್ತೆಗಳೆಲ್ಲ ಹದಗೆಟ್ಟಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ರೊಜ್ಜುಮಯವಾಗಿ ತಿರುಗಾಡಲು ಸಾಧ್ಯವಾಗದಷ್ಟು ಕೆಟ್ಟು ಹೋಗಿವೆ ಅಂತ ಮಹಿಳೆಯರು ಅಳಲು ತೋಡಿಕೊಂಡರು.
ಈ ವಿಚಾರ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಯಾವುದೇ ಕೆಲಸ ಆಗಿಲ್ಲ. ಇನ್ನಾದರೂ ರಸ್ತೆಗಳು, ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಗ್ರಾಮ ಪಂಚಾಯ್ತಿ ಸದಸ್ಯರಾದಿಯಾಗಿ ಅಧ್ಯಕ್ಷರು, ಕಾರ್ಯಾಲಯದ ಅಧಿಕಾರಿ ವರ್ಗ ಮುಂದಾಗಬೇಕು ಎಂದು ಕೈ ಮುಗಿದು ಕೇಳುತ್ತೇವೆ. ಒಂದು ಸಲವಾದರೂ ಅಧಿಕಾರಿ ವರ್ಗ ಗ್ರಾಮದ ದುಃಸ್ಥಿತಿ ಬಂದಾದರೂ ನೋಡಿ ಎಂದು ಅಳಲು ತೋಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


