ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಶೆಡ್‌ನಲ್ಲಿಟ್ಟು ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಅಶ್ಲೀಲ ಮೆಸೇಜ್ ಮಾಡಿದ್ದೇ ಕೊಲೆಗೆ ಪ್ರಮುಖ ಕಾರಣವಾಗಿತ್ತು ಎನ್ನಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಒಂದೊಂದೇ ಅಂಶಗಳು ಬೆಳಕಿಗೆ ಬರುತ್ತಿದೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಮಾತ್ರವಲ್ಲದೆ ಬೇರೆ ಅವರಿಗೂ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎಂದು ಪ್ರಕರಣದ ಎ14 ಆರೋಪಿ ಪ್ರದೂಶ್ ಸ್ವ ಇಚ್ಛಾ ಹೇಳಿಕೆ ನೀಡಿದ್ದಾನೆ.
ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಶುಭಾ ಪೂಂಜಾ ಅವರಿಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಮಸೇಜ್ ಮಾಡಿದ್ದಾನೆ ಎಂದು ಪ್ರದೋಶ್ ಹೇಳಿಕೆ ನೀಡಿದ್ದ.
ಈ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆ ಇಬ್ಬರು ನಟಿಯರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರಾಗಿಣಿ, “ನಕಲಿ ಖಾತೆ ಇಂತಹ ಮೆಸೇಜ್ ಗಳು ಬರುತ್ತಲೇ ಇರುತ್ತವೆ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ನನಗೆ ಗೌತಮ್ ಎನ್ನುವ ಖಾತೆಯಿಂದ ಮೆಸೇಜ್ ಬಂದಿರುವ ಬಗ್ಗೆ ಮಾಹಿತಿಯಿಲ್ಲ. ನಾನು ಸೋಶಿಯಲ್ ಮೀಡಿಯಾ ಹ್ಯಾಂಡಲ್ ನೋಡಿಕೊಳ್ಳುವ ಜಬಾಬ್ದಾರಿಯನ್ನು ಸಿಂಗಾಪುರ ಮೂಲದ ಏಜೆನ್ಸಿಗೆ ನೀಡಿದ್ದೇನೆ. ಏನೇ ಮೆಸೇಜ್ ಬಂದರೂ ಅವರು ಹ್ಯಾಂಡಲ್ ಮಾಡುತ್ತಾರೆ” ಎಂದು ಮಾಧ್ಯಮವೊಂದಕ್ಕ ಅವರು ಹೇಳಿದ್ದಾರೆ.
ನಟಿ ಶುಭಾ ಪೂಂಜಾ ಈ ಬಗ್ಗೆ ಇನ್ಸಾಗ್ರಾಮ್‌ನಲ್ಲಿ ಸ್ಟೋರಿ ಹಾಕಿಕೊಂಡಿದ್ದಾರೆ. “ರೇಣುಕಾಸ್ವಾಮಿ ವಿಚಾರದಲ್ಲಿ ಬೆಳಗ್ಗೆಯಿಂದ ನನಗೆ ಕರೆ ಮಾಡುತ್ತಿರುವ ನನ್ನ ಮಾಧ್ಯಮ ಮಿತ್ರರೇ ನಾನು ಆ ರೀತಿಯ ಯಾವುದೇ ಮೆಸೇಜ್‌ಗಳನ್ನು ನನ್ನ ವೈಯಕ್ತಿಕ ಖಾತೆಗೆ ಸ್ವೀಕರಿಸಿಲ್ಲ ಎಂದು ಈ ಮೂಲಕ ಸ್ಪಷ್ಟನೆ ನೀಡುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q