ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ದಿನಾಚರಣೆ–2024ರ ಅಂಗವಾಗಿ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 06–18 ವರ್ಷ (2006ರ ಆಗಸ್ಟ್ 1ರಂದು ಹಾಗೂ ನಂತರ ಜನಿಸಿದ)ದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಹಸ ಪ್ರದರ್ಶಿಸಿದ ಪ್ರಕರಣವು 2023ರ ಆಗಸ್ಟ್ 1 ರಿಂದ 2024ರ ಜುಲೈ 1ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತುಮಕೂರು/ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ, ಯುವಜನ ಸೇವೆ ಮತ್ತು ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕಚೇರಿಯಿಂದ ಪಡೆದು ಕನ್ನಡದಲ್ಲಿಯೇ ಭರ್ತಿ ಮಾಡಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸೆಪ್ಟೆಂಬರ್ 27ರೊಳಗೆ ಸಲ್ಲಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q