nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದ ಮಧುಬಂಗಾರಪ್ಪ ಹೇಳಿದ್ದೇನು?
    ತುಮಕೂರು September 11, 2024

    ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದ ಮಧುಬಂಗಾರಪ್ಪ ಹೇಳಿದ್ದೇನು?

    By adminSeptember 11, 2024No Comments2 Mins Read
    madhubangarappa

    ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ. ಸರ್ಕಾರ ಪತನಕ್ಕೆ ಟೈಮ್‌ ಬಾಂಬ್ ಫಿಕ್ಸ್ ಆಗಿದೆ.‌ ಸಂಕ್ರಾಂತಿ ದೂರ ಆಯ್ತು, ದೀಪಾವಳಿ ಒಳಗೆ ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರ ಢಮಾರ್ ಆಗುತ್ತೆ ಎಂದು ಬಿಜೆಪಿ ನಾಯಕರ ಹೇಳಿಕೆ ಕುರಿತು ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದೀಪಾವಳಿ ಮಾಡೋಕೆ ಹೇಳಿ ಎಂದು ಮಧುಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇರುತ್ತೆ, ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದ್ರಿ‌ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮಧುಬಂಗಾರಪ್ಪ ಪ್ರಶ್ನಿಸಿದರು.

    ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕೋರ್ಟ್ ಅನ್ನುವುದು ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ. ನ್ಯಾಯಿಕ ವಿಚಾರಣೆ ನಡೆದುಕೊಂಡು ಹೋಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎನ್ನುವುದು ನಮ್ಮೆಲ್ಲರ ಆಸೆ, ಅವರು ಮುಂದುವರೆಯುತ್ತಾರೆ ಎಂದರು.

    ಕೋರ್ಟ್ ನಲ್ಲಿ ದೆಹಲಿ ಸಿಎಂ ಅರವಿಂದ ಕ್ರೇಜಿ ವಾಲ್, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರದ್ದು ಕೇಸ್ ಇದೆ, ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣ್ತಾರೆ ಎಂದ ಮಧುಬಂಗರಾಪ್ಪ ಬಿಜೆಪಿಯನ್ನು ಪ್ರಶ್ನಿಸಿದರು.

    ನಮ್ಮ ತಂದೆ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೇಕಾದಷ್ಟು ಕೇಸ್ ಗಳನ್ನ ನಾವು ಸಹ ನೋಡಿದ್ದೇವೆ, ಇದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಸಿಎಂ ರೇಸ್ ನಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಿನವರು ಇದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ. ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ, ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

    ಬಿಜೆಪಿಗೆ ಸಿದ್ದರಾಮಯ್ಯ ಭಯ ಇದೆಯೇ ಎಂಬ ಪ್ರಶ್ನೆಗೆ, ಬಿಜೆಪಿ ಅಷ್ಟೇ ಅಲ್ಲಾ ಜೆಡಿಎಸ್ ಸೇರಿ ಎಲ್ಲ ವಿರೋಧ ಪಕ್ಷದವರಿಗೂ ಭಯ ಇದೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇರುತ್ತೆ, ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದ್ರಿ‌ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮಧುಬಂಗಾರಪ್ಪ ಪ್ರಶ್ನಿಸಿದರು.

    ಶಾಲೆಗಳಲ್ಲಿ ಪಾಠ ಮಾಡದೇ ಇತರೇ ಕೆಲಸ ಮಾಡುತ್ತ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದಿದ್ದಾರೆ. ಶಿಕ್ಷಕರಾದವರು ಶಾಲೆಯಲ್ಲಿಯೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುವ ದೂರುಗಳು ಬಂದಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನ ಸೆಳೆದಿದೆ. ಶಿಕ್ಷಕರು ಇಲ್ಲವೇ ಸರಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ ಎಂದ ಮಾತ್ರಕ್ಕೆ ಅದನ್ನೇ ಮುಖ್ಯ ಕಾಯಕ ಮಾಡಿಕೊಂಡರೆ ಹೇಗೆ ಎಂದು ಪ್ರಶ್ನಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.