ತುಮಕೂರು: ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಗುಲಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರ ಬಳಿಯ ಅದಲಾಪುರ ಗ್ರಾಮದಲ್ಲಿ ನಡೆದಿದೆ.
ಗುಬ್ಬಿ ತಾಲೂಕಿನ ಅಡಗೂರು ಗ್ರಾಮದ ಮದನ್ (24), ಮೃತ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ. ನಿನ್ನೆ ರೋಟಿಯಿಂದ ತೆಂಗಿನಮರದಲ್ಲಿ ಕಾಯಿ ಕೀಳುತ್ತಿದ್ದ ವೇಳೆ ತೆಂಗಿನಮರದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q