ಮಧುರೈ: ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.
ಪರಿಮಳಾ ಹಾಗೂ ಶರಣ್ಯಾ ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಹಲವು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.
ಗುರುವಾರ ಮುಂಜಾನೆ ನಡೆದ ಈ ಸ್ಫೋಟದ ಬೀಕರತೆಗೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು, ಹೊಗೆ ಆವರಿಸಿತ್ತು. ಒಳಗಿದ್ದವರನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಧುರೈ ಜಿಲ್ಲಾಧಿಕಾರಿ ಎಂ.ಎಸ್. ಸಂಗೀತಾ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q