ತುಮಕೂರು: ಮುಂಬರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಸಮುದಾಯದ ಹಿರಿಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಚರ್ಚೆ ನಡೆಸಿದರು.
ತಿಲಕ್ ಪಾರ್ಕ್ ಪೊಲೀಸ್ ಠಾಣಾ ಆವರಣದಲ್ಲಿ ಸಮುದಾಯದ ಮೌಲ್ವಿಗಳು ಮತ್ತು ಮುಖಂಡರೂಂದಿಗೆ ಜಿಲ್ಲಾ ಚರ್ಚಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಕೋರಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿ.ಮರಿಯಪ್ಪ, ನಗರ ಡಿಎಸ್ಪಿ ಚಂದ್ರಶೇಖರ್, ಇನ್ಸ್‌ಪೆಕ್ಟರ್ ಗಳಾದ ಪುರುಷೋತ್ತಮ್, ದಿನೇಶ್, ಗುರುನಾಥ್ ಹಾಗೂ ಪಿಎಸ್ ಐ ಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q