ಕೊರಟಗೆರೆ: ತುಂಬಾಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ನಟರಾಜು ಟಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮ ಪಂಚಾಯಿತಿಯ ಈ ಹಿಂದೆ ಇದ್ದ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ಅಧ್ಯಕ್ಷರ ಸ್ಥಾನ ಖಾಲಿ ಇತ್ತು. ಹೀಗಾಗಿ ಎರಡನೆಯ ಅವಧಿಯ ನೂತನ ಅಧ್ಯಕ್ಷರ ಚುನಾವಣೆ ಇಂದು ನಡೆಯಿತು.
ಗ್ರಾಮ ಪಂಚಾಯತಿಯ 16 ಜನ ಸದಸ್ಯರು ಸೇರಿ ಒಮ್ಮತದಿಂದ ಅವಿರೋಧವಾಗಿ ನಟರಾಜು ಟಿ.ರವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ತಾಲೂಕು ದಂಡಾಧಿಕಾರಿ ಮಂಜುನಾಥ್ ತಿಳಿಸಿದರು.
ನೂತನ ಅಧ್ಯಕ್ಷ ನಟರಾಜ್ ಮಾತನಾಡಿ, ನಮ್ಮ ಪಂಚಾಯತಿಯ ಸದಸ್ಯರೆಲ್ಲರೂ ಒಟ್ಟಿಗೆ ಕೂಡಿ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ ಅವೆಲ್ಲರಿಗೂ ನಾನು ಚಿರಋಣಿ ಅವರೆಲ್ಲರ ಜೊತೆಗೂಡಿ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಾಜಿ ಅಧ್ಯಕ್ಷ ಹರೀಶ್ ಸೇರಿದಂತೆ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು, ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ತಂಡ ಮತ್ತು ಗ್ರಾಮಸ್ಥರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


