ಬೆಂಗಳೂರು: ರಾಹುಲ್ ಗಾಂಧಿ ನಾಯಕರಲ್ಲ, ಅಪ್ರಬುದ್ಧ ವ್ಯಕ್ತಿ ಎಂದು ಎಂದು ವಿಧಾನಪರಿಷತ್ ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್, ಪಾಳು ಬಿದ್ದ ಮನೆಗೆ ಉಳಿದವನೇ ನಾಯಕ ಎಂಬಂತೆ ಅವರು ಮುಖಂಡರಾಗಿದ್ದಾರೆ. ನೆಹರೂ ಅವರು ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾಗಾಂಧಿ, ರಾಜೀವ್ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು.
ರಾಹುಲ್ ಗಾಂಧಿಯವರು ಲೋಕಸಭೆಯ ವಿಪಕ್ಷ ನಾಯಕರಾಗಿದ್ದು, ಅವರನ್ನು ನಾನು ಗೌರವಿಸಲೇಬೇಕು. ಈ ಗೌರವ ಬೇರೆ; ಭಾರತ ದೇಶದಲ್ಲಿ ತಾವು ಅಧಿಕಾರಕ್ಕೆ ಬಂದಾಗ ಮೀಸಲಾತಿಯನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಅಮೆರಿಕದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಪಕ್ಷ ದಲಿತ ವಿರೋಧಿಯಾಗಿತ್ತು; ಮೀಸಲಾತಿಯ ವಿರೋಧಿಯಾಗಿತ್ತು. ಆದರೆ, ವೋಟ್ ಬ್ಯಾಂಕಿಗಾಗಿ ಅವರು ತಾವು ಮೀಸಲಾತಿ, ಸಂವಿಧಾನದ ಪರ ಎಂದಿದ್ದರು ಎಂದು ನುಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296