ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ ಎಂದು ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರ ಎರಡು ಆಡಿಯೋ ನಾಳೆ ಬಿಡುಗಡೆ ಮಾಡುತ್ತೇನೆ. ಹನುಮಂತರಾಯಪ್ಪ ಜೊತೆ ಮಾತನಾಡಿರುವ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮುನಿರತ್ನ ನನಗೆ ಕೊಡಬಾರದ ಹಿಂಸೆ ಕೊಟ್ಟಿದ್ದಾರೆ. ನನ್ನ ಪತ್ನಿಯ ಫೋಟೋ ಕಳುಹಿಸುವಂತೆ ಹಿಂಸಿಸಿದ್ದಾರೆ, ನಿಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಮುನಿರತ್ನ ಕಡೆಯವರು ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಆಗುತ್ತದೆ ಎಂದು ಬೆದರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು ಗೊತ್ತಾ? ನಮ್ಮ ಎಂಎಲ್ ಎ ಮುನಿರತ್ನ ಭಾಮೈದ ಎಂದು ಹೆದರಿಸಿ ಧಮ್ಕಿ ಹಾಕಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು ರಕ್ಷಣೆ ನೀಡುವಂತೆ ಅವರು ಕಣ್ಣೀರು ಹಾಕಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q