nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐದು ಗ್ರಾಮಗಳಿಗೆ ಕಂಟಕವಾದ ಗರುಡಾಚಲ ನದಿಯ  ಸೇತುವೆಗಳು | ಪ್ರತಿ ನಿತ್ಯದ ಸಂಚಾರಕ್ಕೆ ಹೈರಾಣಾದ ಜನರು
    ಕೊರಟಗೆರೆ September 16, 2024

    ಐದು ಗ್ರಾಮಗಳಿಗೆ ಕಂಟಕವಾದ ಗರುಡಾಚಲ ನದಿಯ  ಸೇತುವೆಗಳು | ಪ್ರತಿ ನಿತ್ಯದ ಸಂಚಾರಕ್ಕೆ ಹೈರಾಣಾದ ಜನರು

    By adminSeptember 16, 2024No Comments2 Mins Read
    koratagere

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೆಡೆ ಬೆಳೆ ಹಾನಿ, ಆಸ್ತಿಪಾಸ್ತಿ ಹಾನಿಯಾಗಿದ್ದು  ಮಳೆ ಬಂದಾಗ ಸಾಮಾನ್ಯವಾಗಿ  ರಸ್ತೆಗಳು ಸೇತುವೆಗಳು ಹಾಳಾಗುವುದು ಕಾಣುತ್ತಿದ್ದೇವೆ ಆದರೆ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ತಾಲೂಕಿನ ಹಲವು ಕೆರೆಕಟ್ಟೆಗಳು ತುಂಬಿ ಗರುಡಾಚಲ,ಸುವರ್ಣಮುಖಿ, ಜಯಮಂಗಲಿ ನದಿಗಳು  ಮೈದುಂಬಿ ಹರಿದಿವೆ ಕೆಲವೆಡೆ ನದಿಗಳು ಹರಿದ ರಭಸಕ್ಕೆ ಸೇತುವೆಗಳು ಕೊಚ್ಚಿ ಹೋಗಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ  ರಸ್ತೆಗಳು ಕಾಣದಾಗಿ ಈ ಭಾಗದ ಜನರ ಓಡಾಟ ಹೇಳತೀರದಾಗಿದೆ..


    Provided by
    Provided by

    ಅದೇ ರೀತಿಯಾಗಿ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಬೈಚಾಪುರ ಗ್ರಾಮ ಪಂಚಾಯಿತಿಗೆ ಸೇರಿದ  ತೊಗರಿಘಟ್ಟ,ಪಣ್ಣೇನಹಳ್ಳಿ ಹನುಮೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳನ್ನು ಸಂಪರ್ಕಿಸುವ ಎರಡು ಸೇತುವೆಗಳು ಕೊಚ್ಚಿ ಹೋಗಿ ಸುಮಾರು ಎರಡು ತಿಂಗಳುಗಳಿಂದ  ಈ ಗ್ರಾಮಗಳ ಜನರು ಓಡಾಡಲು ಕಷ್ಟಕರವಾಗಿದೆ ಗೃಹ ಸಚಿವರ ತವರಲ್ಲಿಯೇ ಇಂತಹ  ಸೇತುವೆಗಳಿಂದ ಜನರಿಗೆ ಕಂಟಕ ಎದುರಾಗಿದೆ..

    ಈ ಭಾಗದ ಜನರು ಸ್ಥಳೀಯ ಜನ ಪ್ರತಿನಿಧಿಗಳು ತಹಶೀಲ್ದಾರ್ ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪ ಮಾಡುತ್ತಾರೆ.

    ಪ್ರತಿನಿತ್ಯ ಪಣೇನಹಳ್ಳಿ, ತೊಗರಿಘಟ್ಟ ಹನುಮೇನಹಳ್ಳಿ, ಚಿಕ್ಕನಹಳ್ಳಿ  ಸೇರಿದಂತೆ ದುಗ್ಗೇನಹಳ್ಳಿ, ಬೀಡಿಪುರ ಬೈಚಾಪುರಕ್ಕೆ ಸಂಪರ್ಕಿಸುವ ಈ ರಸ್ತೆಗಳು ಶಾಲಾ ಮಕ್ಕಳಿಗೆ ವೃದ್ಧರಿಗೆ ದ್ವಿಚಕ್ರ ವಾಹನ ಸವಾರರಿಗೆ ಕಂಟಕಪ್ರಾಯವಾಗಿವೆ.

    ನದಿಗಳು ಹರಿದ ರಭಸಕ್ಕೆ ಸೇತುವೆಗೆ ಅಳವಡಿಸಲಾಗಿದ್ದ ಸಿಮೆಂಟಿನ ರಿಂಗ್ ಗಳು ನೀರಿನ ಸೇಳತಕ್ಕೆ ಸೇತುವೆ ಕೊಚ್ಚಿ ಹೋಗಿವೆ. ಈ ಭಾಗದಲ್ಲಿ ಸುಮಾರು 12 ಅಡಿಗೂ ಹೆಚ್ಚು ಆಳ ಗುಂಡಿ ಬಿದ್ದು  ಗ್ರಾಮಗಳನ್ನು ಸಂಪರ್ಕಿಸುವ ಕೊಂಡಿ ತಪ್ಪಿದಂತಾಗಿದೆ.

    ಹನುಮೇನಹಳ್ಳಿ ಗ್ರಾಮದ ಮುಖಂಡ ಮಂಜುನಾಥ್ ಅವರು ಮಾತನಾಡುತ್ತಾ ಸುಮಾರು ಎರಡು ತಿಂಗಳುಗಳಿಂದ ಈ ಸೇತುವೆ ಕೊಚ್ಚಿ ಹೋಗಿ ಶಾಲಾ ಮಕ್ಕಳು ಸೇರಿದಂತೆ ಪಿಂಚಣಿ ಹಾಗೂ ಸರ್ಕಾರಿ ಕೆಲಸಕ್ಕೆ ತೆರಳುವ ಸಾರ್ವಜನಿಕರು ವೃದ್ಧರಿಗೆ ಬಹಳ ಸಂಕಷ್ಟ ಎದುರಾಗಿದೆ  ಈ ಬಗ್ಗೆ ಅನೇಕ ಬಾರಿ ಮನವಿ ನೀಡಿದರು ಯಾರು ಕೂಡಾ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಈಗಾಗಲೇ ತಹಶೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳಿಗೆ ಸಂಪರ್ಕ ಕೊಂಡಿಯಂತಿರುವ ರಸ್ತೆಯನ್ನು ಸರಿಪಡಿಸುವಂತೆ ಮನವಿ ನೀಡಿದ್ದೇವೆ ದಯಮಾಡಿ ನಮಗೆ ಸಂಪರ್ಕಿಸುವ ಎರಡು ರಸ್ತೆಗಳನ್ನ ಸರಿಪಡಿಸಬೇಕು ಇಲ್ಲವೇ ತಾತ್ಕಾಲಿಕವಾಗಿ ರಸ್ತೆ ಸಂಚರಿಸುವ ಮಾರ್ಗವನ್ನು ಗುರುತಿಸಿ ಕೊಡಬೇಕು ಎಂದು ಮನವಿ ಮಾಡಿದರು.

    ಪಣ್ಣೇನಹಳ್ಳಿಯ ಗ್ರಾಮಸ್ಥ ಶ್ರೀನಿವಾಸ್ ಅವರು ಮಾತನಾಡುತ್ತಾ ಚುನಾವಣಾ ಸಮಯದಲ್ಲಿ ಆಗಮಿಸುವ ಜನಪ್ರತಿನಿಧಿಗಳು ಒಂದು ಊರಿಗೆ ರಸ್ತೆ ಸೇರಿದಂತೆ ಇತರೆ ಸೌಕರ್ಯಗಳು ಕೆಟ್ಟು ಹೋದ ಸಂದರ್ಭದಲ್ಲಿ ಬರುವುದಿಲ್ಲ  ನಮ್ಮ ಗ್ರಾಮಗಳಿಗೆ ರಸ್ತೆ ಸಂಪರ್ಕ ಇಲ್ಲದೆ ಅನೇಕ ಪಿಂಚಣಿ ತೆಗೆದುಕೊಳ್ಳಲಾಗದೆ ವೃದ್ಧರು ಪರದಾಡುತ್ತಿದ್ದಾರೆ ಪ್ರತಿನಿತ್ಯ ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಈ ಭಾಗವಾಗಿ ಸಂಚರಿಸುತ್ತಾರೆ. ಕೇವಲ ಒಂದು ದ್ವಿಚಕ್ರ ವಾಹನ ಹೋಗುವಂತಹ ಬಂಡೆ ಕಲ್ಲನ್ನ ಗ್ರಾಮಸ್ಥರೇ ಹಾಕಿಕೊಂಡು ತೆರಳುತ್ತಿದ್ದೇವೆ, ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಇತರೆ ಅಧಿಕಾರಿಗಳು ಕಣ್ಣಿಗೆ ಕಾಣುವಂತಹ ಮಳೆ ಹಾನಿ ಪ್ರದೇಶಕ್ಕೆ ಮಾತ್ರ ತೆರಳುತ್ತಾರೆ ಇಂತಹ ಕುಗ್ರಾಮಗಳಿಗೆ ಸಂಪರ್ಕಿಸುವ ದುರ್ಗಮ ಪರಿಸ್ಥಿತಿಯ ರಸ್ತೆಗಳ ಮಾಹಿತಿ ಅವರುಗಳಿಗೆ ಇರುವುದೇ ಇಲ್ಲ ಹೀಗಾಗಿ ಕೂಡಲೇ ಈ ಸ್ಥಳಕ್ಕೆ ಭೇಟಿ ನೀಡಿ ಸೇತುವೆ ಸರಿಪಡಿಸಬೇಕು ಎಂದು ಆಗ್ರಹಿಸಿದರು.

    ಹೀಗೆ ಕೊರಟಗೆರೆ ತಾಲೂಕಿನ ಗಡಿ ಭಾಗ ಸೇರಿದಂತೆ ಅನೇಕ ಗ್ರಾಮಗಳು ಮೂಲ ಸೌಕರ್ಯಗಳಿಲ್ಲದೆ ಸಂಪರ್ಕಗಳನ್ನು ಕಳೆದುಕೊಂಡು ಪರದಾಡುತ್ತಿದ್ದರು ಯಾರೊಬ್ಬರೂ ಇತ್ತ ಕಡೆ ಗಮನ ಹರಿಸದೇ ಇರುವುದು ಅಭಿವೃದ್ಧಿ ಪಡಿಸದೇ ಇರುವುದು ಸೂಚನೆಯ ಸಂಗತಿ ಎಂದು ಈ ಗ್ರಾಮಗಳ ಗ್ರಾಮಸ್ಥರು ಗೊಣಗಿಕೊಳ್ಳುತ್ತಾರೆ.

    ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಸ್ಥಳ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಂಡು ಶೀಘ್ರವೇ ಸೇತುವೆ ಕಾಮಗಾರಿ ಆರಂಭ ಮಾಡುತ್ತಾರಾ ಎಂದು ಕಾದು ನೋಡೋಣ..


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.