ಉಡುಪಿ: ಯಕೃತ್ ದಾನ ಮಾಡಲು ಹೋಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಅರ್ಚನಾ ಕಾಮತ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಕೋಟೇಶ್ವರದಲ್ಲಿ ಈ ಘಟನೆ ನಡೆದಿದೆ.
69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿ ಅವಶ್ಯವಿದ್ದ ಕಾರಣ ಅರ್ಚನಾ ಕಾಮತ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಯಕೃತ್ ದಾನ ಮಾಡಿದ್ದರು. ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು.
ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸೋಂಕು ತಗುಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


