ಬೆಂಗಳೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ಹಲ್ಲೆ ನಡೆಸಿ ಆತನ ಸಾವಿಗೆ ಕಾರಣವಾಗಿರುವ ಬಗ್ಗೆ ಮೃತನ ಪತ್ನಿ ಸಿಎಂಗೆ ದೂರು ನೀಡಿದ್ದಾರೆ.
ಮೃತ ವ್ಯಕ್ತಿ ರಾಮಸ್ವಾಮಿ ಎಂದು ಗುರುತಿಸಲಾಗಿದೆ. ಇವರ ಪತ್ನಿ ಮುನಿಯಮ್ಮ ಎಂಬವರು ಸಿಎಂ ಸಿದ್ದರಾಮಯ್ಯನವರಿಗೆ ಕೋಣನಕುಂಟೆ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಪಾಪಣ್ಣ ವಿರುದ್ಧ ದೂರು ನೀಡಿದ್ದಾರೆ.
ತನ್ನ ಪತಿಯ ಸಾವಿಗೆ ಕಾರಣವಾದ ಇನ್ಸ್ ಪೆಕ್ಟರ್ ಪಾಪಣ್ಣ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮುನಿಯಮ್ಮ ಮನವಿ ಮಾಡಿಕೊಂಡಿದ್ದಾರೆ.
ಇನ್ಸ್ ಪೆಕ್ಟರ್ ಪಾಪಣ್ಣ, ತಮ್ಮ ಜಮೀನಿನ ಬಳಿ ಬಂದು ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಸೆ.13ರಂದು ತನ್ನ ಪತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


