ತುಮಕೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ವಿದ್ಯುತ್ ತಂತಿ ಸ್ಪರ್ಶಿಸಿ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಯ್ಯ(55) ಮೃತಪಟ್ಟವರಾಗಿದ್ದಾರೆ. ಎಂದಿನಂತೆ ಹೊಲಕ್ಕೆ ಕೆಲಸಕ್ಕೆ ತೆರಳಿದ್ದ ಇವರು ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ಪರಿಣಾಮ ವಿದ್ಯುತ್ ಶಾಕ್ ನಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ತಂತಿ ಕಟ್ಟಾಗಿ ಹೊಲದಲ್ಲಿ ಬಿದ್ದಿತ್ತು. ಇದನ್ನು ಗಮನಿಸಿದ ಸ್ಥಳೀಯರು ವಿದ್ಯುತ್ ಅಂತಿಯನ್ನ ಸರಿಪಡಿಸಲು ಸ್ಥಳೀಯ ಬೆಸ್ಕಾಂ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಇದೀಗ ವ್ಯಕ್ತಿಯೊಬ್ಬರ ಪ್ರಾಣ ಬಲಿಯಾಗಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q