ಬಿಹಾರ: ಕಾರಿನಲ್ಲಿ ಬಂದೂಕು ತೋರಿಸಿ ಬೆದರಿಸಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸೋಮವಾರ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಲೆ.
ಬಿಹಾರದ ಸಹರ್ಸದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸದಾರ್ ಪ್ರದೇಶದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಹರ್ಸದ ಎಸ್‌ಪಿ ಹಿಮಾಂಶು ತಿಳಿಸಿದ್ದಾರೆ.
ಸಂತ್ರಸ್ತೆಯ ವೈದ್ಯಕೀಯ ತಪಾಸಣಾ ವರದಿ ಇನ್ನು ಬರಬಾಗಿದೆ. ಎಲ್ಲ ಆಯಾಮಗಳಲ್ಲಿ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q