nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”

    October 2, 2025

    ಈ ದಿನದ ಶೀರ್ಷಿಕೆ: ಹಿರಿಯರ ಶಾಪ

    October 2, 2025

    ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

    October 2, 2025
    Facebook Twitter Instagram
    ಟ್ರೆಂಡಿಂಗ್
    • “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”
    • ಈ ದಿನದ ಶೀರ್ಷಿಕೆ: ಹಿರಿಯರ ಶಾಪ
    • ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
    • ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ
    • ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು
    • ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್
    • ಬಟ್ಟೆ ಖರೀದಿ ನೆಪದಲ್ಲಿ ಚಿನ್ನ ಕಳವು: ಒಂದು ವರ್ಷದ ಬಳಿಕ ಮಹಿಳೆಯರ ಗ್ಯಾಂಗ್ ಅರೆಸ್ಟ್
    • ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ವಿರುದ್ಧ ಜಾತಿ ನಿಂದನೆ ಪ್ರಕರಣ: ಕ್ರಮಕ್ಕೆ ಅರಣ್ಯ ಸಚಿವರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಂ ವಿಶ್ವಕರ್ಮ ಯೋಜನೆ ಸೌಲಭ್ಯ: ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು: ವಿ.ಸೋಮಣ್ಣ
    ತುಮಕೂರು September 18, 2024

    ಪಿಎಂ ವಿಶ್ವಕರ್ಮ ಯೋಜನೆ ಸೌಲಭ್ಯ: ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು: ವಿ.ಸೋಮಣ್ಣ

    By adminSeptember 18, 2024No Comments3 Mins Read
    vishwakarma

    ತುಮಕೂರು: ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳಿಗೆ ಆದ್ಯತೆ ನೀಡಬೇಕೆಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಸಹಯೋಗದಲ್ಲಿಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಂಪ್ರದಾಯಿಕ ವೃತ್ತಿಯಲ್ಲಿ ತೊಡಗಿಕೊಂಡು ಸಮಾಜದಲ್ಲಿ ದನಿಯಿಲ್ಲದ ವಿಶ್ವಕರ್ಮ ಸಮುದಾಯದವರನ್ನು ಪಿಎಂ ವಿಶ್ವಕರ್ಮ ಯೋಜನೆಗೆ ಪರಿಗಣಿಸಬೇಕು. ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡು ಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸ್ಥಳದಲ್ಲಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು ಅವರಿಗೆ ಸೂಚಿಸಿದರು.


    Provided by
    Provided by
    Provided by

    ವಿಶ್ವಕರ್ಮ ಸಮುದಾಯವು ಹಿಂದೂ ಧರ್ಮಕ್ಕೆ ನೀಡಿರುವ ಕೊಡುಗೆ ಅಪಾರವಾದದು. ಸನಾತನ ಕಾಲದಿಂದಲೂ ಶಿಲ್ಪಿಗಳು, ಸ್ವರ್ಣಕಾರರು ಸೇರಿದಂತೆ ವಿಶ್ವಕರ್ಮ ಸಮುದಾಯದವರು ಪಂಚ ಕಸುಬುಗಳ ನೈಪುಣ್ಯತೆಯನ್ನು ಸಮಾಜಕ್ಕೆ ನೀಡಿದ್ದಾರೆ ಎಂದರು.

    ವಿಶ್ವದ ಯಾವುದೇ ಕೆತ್ತನೆ, ಕುಸುರಿ, ಆಭರಣಗಳಲ್ಲಿ ವಿಶ್ವಕರ್ಮ ಸಮುದಾಯದವರ ಸ್ಪರ್ಶವನ್ನು ಕಾಣಬಹುದಾಗಿದೆ. ವಿಶ್ವಕರ್ಮರ ಸ್ಪರ್ಶವಿಲ್ಲದ ವಡವೆಗಳಿಲ್ಲ, ಗುಡಿ-ಗೋಪುರಗಳಿಲ್ಲ, ಮಠ–ಮಂದಿರಗಳಿಲ್ಲ, ಕೃಷಿ–ಸಲಕರಣೆಗಳಿಲ್ಲ, ಸಂಗೀತ–ಸಾಧನಗಳಿಲ್ಲ, ಜೀವಕಳೆ ಕೊಡುವ ದೇವತಾ ಮೂರ್ತಿಗಳಿಲ್ಲ ಎಂದು ವಿಶ್ವಕರ್ಮ ಸಮುದಾಯದ ಕುಲ ಕಸುಬಿನ ಬಗ್ಗೆ ಬಣ್ಣಿಸಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡುತ್ತಾ, ವಿಶ್ವಕರ್ಮ ಸಮುದಾಯದವರು ಸ್ವಾವಲಂಬಿಗಳು. ಪರಾವಲಂಬಿಯಾಗದೆ ಸ್ವಯಂ ಉದ್ಯೋಗ ಕೈಗೊಂಡು ಪ್ರಾಮಾಣಿಕವಾಗಿ ಬದುಕುವವರು. ಶಿಲ್ಪಕಲೆಯನ್ನು ದೇವರೆಂದು ಭಾವಿಸುವ ಈ ಜನಾಂಗ ವಾಸ್ತುಶಿಲ್ಪ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದೆ. ವಿಜಯನಗರ ಸಾಮ್ರಾಜ್ಯದ ಹಂಪಿ, ಜಿಲ್ಲೆಯ ತಿಪಟೂರು ತಾಲ್ಲೂಕು ಅರಳುಗುಪ್ಪೆ ಹಾಗೂ ಕೈದಾಳದ ಚೆನ್ನಕೇಶವ ದೇವಸ್ಥಾನಗಳಲ್ಲಿರುವ ಶಿಲ್ಪಕಲೆಗಳು ಇವರ ವಾಸ್ತುಶಿಲ್ಪ ಕೌಶಲ್ಯಕ್ಕೆ ಸಾಕ್ಷಿಯಾಗಿವೆ ಎಂದು ತಿಳಿಸಿದರು.

    ಸರ್ಕಾರ ವಿಶ್ವಕರ್ಮ ಸಮುದಾಯಕ್ಕೆ ನೀಡಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು. ಜಿಲ್ಲಾಡಳಿತದಿಂದ ಪಿಎಂ ವಿಶ್ವಕರ್ಮ ಯೋಜನೆಯಡಿ 18 ಕಲೆಗಳಲ್ಲಿ ತೊಡಗಿಸಿಕೊಂಡಿರುವ 174831 ಜನರನ್ನು ನೋಂದಣಿ ಮಾಡಲಾಗಿದ್ದು, ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳುವ ಮೂಲಕ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಕುರಿತು ಕೇಂದ್ರ ಸರ್ಕಾರ ಮೆಚ್ಚುಗೆಯನ್ನು ಸೂಚಿಸಿದೆ ಎಂದು ಸಂತಸ ಹಂಚಿಕೊAಡರಲ್ಲದೆ ಈವರೆಗೆ ಯೋಜನೆಯಡಿ 8025 ಫಲಾನುಭವಿಗಳಿಗೆ ತರಬೇತಿ, 18812 ಫಲಾನುಭವಿಗಳಿಗೆ ಟೂಲ್ ಕಿಟ್ ವಿತರಿಸಲಾಗಿದೆ ಎಂದು ತಿಳಿಸಿದರು.

    ಕೆತ್ತನೆ-ಕುಸುರಿ ಸೇರಿದಂತೆ ಪಂಚ ವೃತ್ತಿಗಳ ಕೌಶಲ್ಯ ಹೊಂದಿದವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಆಸಕ್ತ ಯುವ ಜನತೆಗೆ ತರಬೇತಿ ನೀಡಬೇಕು. ಇದರಿಂದ ಪುರಾತನ ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದಲ್ಲದೆ ಉಳಿಸಿ ಬೆಳೆಸಿದಂತಾಗುತ್ತದೆ ಎಂದು ತಿಳಿಸಿದರು.

    ಅಧ್ಯಕ್ಷತೆವಹಿಸಿ ಮಾತನಾಡಿದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು, ವಿಶ್ವಕರ್ಮ ಸಮುದಾಯದಲ್ಲಿರುವ ಸಮಸ್ಯೆಗಳನ್ನು ಪರಿಶೀಲಿಸಿ ನ್ಯಾಯ ಒದಗಿಸುವ ಆಶ್ವಾಸನೆಯನ್ನು ಸಂಸದರು ನೀಡಿದ್ದಾರೆ ಎಂದರಲ್ಲದೆ, ವಿಶ್ವಕರ್ಮ ಸಮುದಾಯದ ಅಭಿವೃದ್ಧಿಯ ಚಿಂತನೆಗಳು ನಡೆಯಬೇಕು. ಸಮುದಾಯದ ಅಭಿವೃದ್ಧಿಗಾಗಿ ಕೈಜೋಡಿಸಲು ನಾವಿದ್ದೇವೆ ಎಂಬ ಭರವಸೆಯ ಮಾತುಗಳನ್ನಾಡಿದರು.

    ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಅಧ್ಯಕ್ಷ ಟಿ. ಮುರಳಿಕೃಷ್ಣಪ್ಪ ಮಾತನಾಡಿ, ವಿಶ್ವಕರ್ಮ ಸಮುದಾಯದ ಕೊಡುಗೆಗಳ ಬಗ್ಗೆ ಉಲ್ಲೇಖಿಸಿರುವ ಸ್ವಾಮಿ ಶಿವಾತ್ಮಾನಂದ ಸರಸ್ವತೀ ಅವರ ವಿರಚಿತ ಹಾಗೂ ಕನ್ನಡಕ್ಕೆ ಅನುವಾದಿಸಿದ ಡಾ. ವೃಷಭೇಂದ್ರಾಚಾರ್ ಅರ್ಕಸಾಲಿ ಅವರ ಪಂಚವೇದ ಸಂಹಿತಾ ವೇದ ಭಗವಾನ್ ಗ್ರಂಥ ಕುರಿತು ಉಪನ್ಯಾಸ ನೀಡಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ, ವಿಶ್ವಕರ್ಮರು ವಿಶ್ವದ ಮೂಲ ಸೃಷ್ಟಿಕರ್ತರು. ಎಲ್ಲರೂ ಒಂದೇ ಎಂಬ ಭಾವದೊಂದಿಗೆ ಪಂಚ ಕರ್ಮಗಳನ್ನು ಅನುಸರಿಕೊಂಡು ವಿಶ್ವಕರ್ಮ ಸಮುದಾಯವು ಸಮಾಜಕ್ಕೆ ಮಾದರಿಯಾಗಿದೆ. ಸಾಂಪ್ರದಾಯಿಕ ಕಸುಬಿನ ಜೊತೆಗೆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದಾಗ ಮಾತ್ರ ಉನ್ನತ ಸ್ಥಾನ ಹೊಂದಲು ಸಾಧ್ಯ ಎಂದರು.

    ಕಾರ್ಯಕ್ರಮವನ್ನು ವಿಶ್ವಕರ್ಮ ಯಜ್ಞ ಮಹೋತ್ಸವ ಸಮಿತಿ ಕಾರ್ಯದರ್ಶಿ ಜೆ.ಎನ್.ಗೋಪಾಲಕೃಷ್ಣಚಾರ್ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಹೆಚ್.ಪಿ. ನಾಗರಾಜು, ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಕೆ.ಬಿ. ಗಜೇಂದ್ರಾಚಾರ್, ಚಿಕ್ಕಪೇಟೆ ಶ್ರೀ ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ವಿ.ಗಂಗರಾಜಾಚಾರ್, ಕಾಳಿಕಾಂಬ ಶ್ರೀ ವಿಶ್ವಕರ್ಮ ಶ್ರೀ ಗಾಯತ್ರಿ ಶ್ರೀ ವೀರಬ್ರಹ್ಮೇಂದ್ರ ಸ್ವಾಮಿ ದೇವಾಲಯ ಅಧ್ಯಕ್ಷ ಹೆಚ್.ಆರ್. ಚಂದ್ರಶೇಖರಾಚಾರ್, ಎಸ್. ಹರೀಶ್ ಆಚಾರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಆರು ಮಂದಿ ವಿಶ್ವಕರ್ಮ ಸಮುದಾಯದ ಎನ್. ವಿಶ್ವಮೂರ್ತಿ, ಎನ್.ಎಸ್. ರವಿ, ಎಲ್. ರವಿ, ವಿ.ಎ. ವಿನಯ್‌ಕುಮಾರ್, ಜಿ. ಲೀಲಾ, ಎಲ್.ಎನ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು ಹಾಗೂ ವಿಶ್ವಕರ್ಮ ಸಮುದಾಯದ 16 ಪ್ರತಿಭಾವಂತ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ

    October 1, 2025

    ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ

    October 1, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”

    October 2, 2025

    ಪಾವಗಡ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಬೆಂಗಳೂರು (DSERT)ರವರು ಹಮ್ಮಿಕೊಂಡಿದ್ದ ಬಾಲ ವೈಜ್ಞಾನಿಕ್ ಪ್ರದರ್ಶಿನಿ ಸ್ಪರ್ಧೆಯಲ್ಲಿ ಇಲ್ಲಿನ…

    ಈ ದಿನದ ಶೀರ್ಷಿಕೆ: ಹಿರಿಯರ ಶಾಪ

    October 2, 2025

    ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

    October 2, 2025

    ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

    October 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.