nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ; ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ: ಗೃಹ ಸಚಿವ ಪರಮೇಶ್ವರ ಹೇಳಿಕೆ
    ರಾಜ್ಯ ಸುದ್ದಿ September 18, 2024

    ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ; ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ: ಗೃಹ ಸಚಿವ ಪರಮೇಶ್ವರ ಹೇಳಿಕೆ

    By adminSeptember 18, 2024No Comments2 Mins Read
    Parameshwara

    ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದರು.

    ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
    ಪೇನ್ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.

    ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

    ಪಿಎಸ್ ಐ ಪರೀಕ್ಷೆಯನ್ನು ಸೆ.22ರಿಂದ ಸೆ.28ಕ್ಕೆ ಮುಂದೂಡಲಾಗಿತ್ತು. ಸೆ.28ರಂದು ಸಹ ಯುಪಿಎಸ್‌ಸಿ ಇಂಗ್ಲೀಷ್ ಪರೀಕ್ಷೆ ಇದೆ ಎಂಬ ಮಾಹಿತಿ ಗೊತ್ತಾದ ಕೂಡಲೇ, ಆ ದಿನವನ್ನು ಅಕ್ಟೋಬರ್ 3ಕ್ಕೆ ಮುಂದೂಡಲಾಗಿತ್ತು. ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರವು ಅ.3ರಂದು ಪರೀಕ್ಷೆ ನಿಗಧಿ ಪಡಿಸಿ ಅಧಿಕೃತವಾಗಿ ಪ್ರಕಟಣೆ ಮಾಡಿದೆ ಎಂದರು.

    ಮೂರು ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ. ‘ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ. ಹೀಗಾಗಿ ಇದರಲ್ಲಿ ನಮ್ಮ ತಪ್ಪೇನಿದೆ ಎಂದು ವಾದಿಸಿದ್ದಾರೆ.’ ಆದಾಗ್ಯೂ ಸಹ ಅವರನ್ನು ಬಂಧಿಸಿದ್ದೇವೆ. ಯಾರು ಈ ಸಂದರ್ಭದಲ್ಲಿ ನಿಮಗೆ ಪ್ರಚೋದನೆ ಮಾಡಿ, ಬಾವುಟ ಹಾರಿಸಲು ಹೇಳಿದರು ಎಂಬ ಕುರಿತು ಬಂಧಿತರ ವಿಚಾರಣೆ ನಡೆಯುತ್ತಿದೆ. 17ರಿಂದ 21 ವರ್ಷ ವಯಸ್ಸಿನ ಹುಡುಗರು ಇದನ್ನು ಮಾಡಿದ್ದಾರೆ ಎಂದು ಹೇಳಿದರು.

    ನಾಗಮಂಗಲ ಪ್ರಕರಣದಲ್ಲಿ ತನಿಖೆಗೂ ಮುನ್ನ ಕ್ಲಿನ್‌ಚಿಟ್ ಆರೋಪದ ಕುರಿತು ಪ್ರತಿಕ್ರಿಯಿಸಿ,
    ಇದನ್ನು ದೊಡ್ಡ ಸಮಸ್ಯೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ. ನಾವು ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು, ಅದೆಲ್ಲವನ್ನು ಕೂಡ ಮುಲಾಜಿಲ್ಲದೆ ಮಾಡಿದ್ದೇವೆ. ಮುಂದಿನ ತನಿಖೆಯಲ್ಲಿ ಏನೆಲ್ಲ ವಿಚಾರಗಳು ಹೊರ ಬರುತ್ತವೆ, ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ರೀತಿಯ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನೂರು ಸಲ ಹೇಳುತ್ತೇನೆ. ದಿನಕ್ಕೆ ಒಬ್ಬೊಬ್ಬರಂತೆ ಬಿಜೆಪಿ ಮುಖಂಡರು ನಾಗಮಂಗಲ ವಿಚಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಬಿಜೆಪಿಯವರು ತಮ್ಮದೇ ಆದ ಒಂದು ಡಿಸೈನ್ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

    ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

    ಶಾಸಕ ಮುನಿರತ್ನನನ್ನು ಏಕಾಏಕಿ ಬಂಧಿಸಿಲ್ಲ. ಆತನ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್ಎಲ್ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

    ಕಳೆದ ವರ್ಷ ಗಣೇಶ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಬಂತೆಂದರೆ ದುರ್ಗಾದೇವಿಯ ಆರಾಧನೆಯ ಜೊತೆಗೆ ಬಣ್ಣಬಣ್ಣದ ಉಡುಪುಗಳು, ಸಂಗೀತದ ಲಯಕ್ಕೆ ಹೆಜ್ಜೆ ಹಾಕುವ ಗರ್ಬಾ ನೃತ್ಯವೂ ಗಮನ ಸೆಳೆಯುತ್ತದೆ.…

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.